ETV Bharat / state

ಸ್ವಿಚ್‌ ಬೋರ್ಡ್‌ನಲ್ಲಿ ಮೊಬೈಲ್‌ ಇಟ್ಟು ಮಹಿಳೆಯ ಖಾಸಗಿ ದೃಶ್ಯ ಸೆರೆ: ಎಲೆಕ್ಟ್ರಿಷಿಯನ್‌ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ - High Court

author img

By ETV Bharat Karnataka Team

Published : Jun 22, 2024, 11:05 PM IST

ಶಿವಮೊಗ್ಗದ ಮಹಿಳೆಯೊಬ್ಬರ ಮನೆಯ ಸ್ವಿಚ್‌ ಬೋರ್ಡ್‌ನಲ್ಲಿ ಮೊಬೈಲ್‌ ಇಟ್ಟು ಆಕೆಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದ ಪ್ರಕರಣದ ಆರೋಪಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.

High Court
ಹೈಕೋರ್ಟ್ (ETV Bharat)

ಬೆಂಗಳೂರು: ಮಹಿಳೆಯೊಬ್ಬರ ಮನೆಯ ಸ್ವಿಚ್‌ ಬೋರ್ಡ್‌ನಲ್ಲಿ ಮೊಬೈಲ್‌ ಇಟ್ಟು ಆಕೆಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದ ಶಿವಮೊಗ್ಗ ಮೂಲದ ಎಲೆಕ್ಟ್ರಿಷಿಯನ್‌ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಎಲೆಕ್ಟ್ರಿಷಿಯನ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಮೇಲ್ನೋಟಕ್ಕೆ ಇದು ವಾಯರಿಸಂ (ಲೈಂಗಿಕ ದರ್ಶನದ ತೃಪ್ತಿ) ಪ್ರಕರಣದಂತೆ ಇದ್ದು, ಅದರಲ್ಲಿಆರೋಪಿ ಕನಿಷ್ಠ ವಿಚಾರಣೆಯನ್ನು ಎದುರಿಸಲಿ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರ ಮೊಬೈಲ್‌ನಲ್ಲಿ ಯಾವುದೇ ಚಿತ್ರಗಳನ್ನು ಅಥವಾ ವಿಡಿಯೊಗಳನ್ನು ಸೆರೆ ಹಿಡಿದಿರಲಿಲ್ಲವೆಂದು ಹೇಳಿದ್ದಾರೆ. ಇದು ವಿಚಾರಣೆಯಲ್ಲಿ ದೃಢಪಡಬೇಕಾಗಿದೆ. ಜತೆಗೆ ಯಾವುದೇ ವ್ಯಕ್ತಿ ತಮ್ಮ ಮೊಬೈಲ್‌ಗಳಲ್ಲಿ ಮಹಿಳೆಯರ ಖಾಸಗಿ ಚಿತ್ರಗಳನ್ನು ನೋಡುವುದು ಅಥವಾ ಸೆರೆಹಿಡಿಯುವುದನ್ನು ಮಾಡಿದರೆ ಅದು ವಾಯರಿಸಂ ಕೃತ್ಯ ಎಸಗಿದಂತೆ. ಹಾಗಾಗಿ ಅಂತಹ ಗಂಭೀರ ಆರೋಪ ಇರುವುದರಿಂದ ಪ್ರಕರಣ ರದ್ದುಗೊಳಿಸಲಾಗದು ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: 2021ರ ಜನವರಿಯಲ್ಲಿ ಎಲೆಕ್ಟ್ರಿಷಿಯನ್‌ ಹಾಗೂ ತಮ್ಮ ಕುಟುಂಬಕ್ಕೆ ಪರಿಚಯವಿರುವ ವ್ಯಕ್ತಿ ತಮ್ಮ ಮನೆಯ ಹಾಲ್‌ನಲ್ಲಿನ ಸ್ವಿಚ್‌ ಬೋರ್ಡ್‌ನಲ್ಲಿ ಮೊಬೈಲ್‌ ಇಟ್ಟು ತಮ್ಮ ಖಾಸಗಿ ಚಿತ್ರ ಹಾಗೂ ವಿಡಿಯೊಗಳನ್ನು ಸೆರೆ ಹಿಡಿದಿದ್ದಾರೆ ಎಂದು ಮಹಿಳೆಯೊಬ್ಬರು ಶಿವಮೊಗ್ಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅಲ್ಲದೇ, ಆ ದೃಶ್ಯಗಳನ್ನು ತಮ್ಮ ಕುಂಟುಂಬದವರೊಂದಿಗೆ ಹಂಚಿಕೊಂಡಿದ್ದಾರೆ. ಇದರಿಂದ ತನ್ನ ಹಾಗೂ ಪತಿಯ ಘನತೆಗೆ ಕುಂದಾಗಿದೆ ಎಂದು ಆರೋಪಿಸಿದ್ದರು.

ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಅದರಲ್ಲಿ ಆರೋಪಿಯು ಆ ಮಹಿಳೆಯ ವಿಡಿಯೋ ಹಾಗೂ ಚಿತ್ರಗಳನ್ನು ಎಲ್ಲರಿಗೂ ಹಂಚುವುದಾಗಿ ಬೆದರಿಕೆಯೊಡಿದ್ದರು ಎಂದು ಹೇಳಲಾಗಿತ್ತು. ಅಲ್ಲದೇ, ದೂರುದಾರ ಮಹಿಳೆಗೆ ಆರೋಪಿಯು ಜೀವ ಬೆದರಿಕೆ ಹಾಕಿರುವುದನ್ನು ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು. ಹಾಗಾಗಿ ಆರೋಪಿಯು ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ ಮೊರೆ ಹೋಗಿದ್ದ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು: ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಮರ್ಡರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.