ETV Bharat / state

ಹುಬ್ಬಳ್ಳಿ- ರಾಮೇಶ್ವರಂ- ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಅವಧಿ ವಿಸ್ತರಣೆ: ರಾಮನಾಥಪುರಂವರೆಗೆ ಸಂಚಾರ - HUBBALLI RAMESHWARAM TRAIN

ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ.

Representative Image
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : June 13, 2025 at 11:44 PM IST

1 Min Read

ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ - ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣ ಕೊನೆಗೊಳಿಲಿದೆ.

ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. ಈ ಪರಿಷ್ಕೃತ ಸೇವೆ ಜುಲೈ 5 ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಇದರ ಜೋಡಿ ರೈಲು, 07356 ಸಂಖ್ಯೆಯ ರಾಮೇಶ್ವರಂ - ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು, ರಾಮೇಶ್ವರಂ ಬದಲಿಗೆ ರಾಮನಾಥಪುರಂನಿಂದ ಜುಲೈ 6 ರಿಂದ 27 ರವರೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 6.50ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ರಾಮನಾಥಪುರಂ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07356 ರಾಮನಾಥಪುರಂನಿಂದ ರಾತ್ರಿ 10ಕ್ಕೆ ಹೊರಟು, ಮರುದಿನ ಸಂಜೆ 7.40ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ. ಈ ರೈಲುಗಳು ತಮ್ಮ ಹಿಂದಿನ ಎಲ್ಲಾ ನಿಗದಿತ ನಿಲುಗಡೆ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಹಿಂದಿನ ಸೂಚನೆಯ ಪ್ರಕಾರ, ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (07355) ರೈಲು ಜೂನ್ 28 ರವರೆಗೆ ಮತ್ತು ರಾಮೇಶ್ವರಂ - ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (07356) ರೈಲು ಜೂನ್ 29ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈ ಸೇವೆಗಳು ಆಯಾ ದಿನಾಂಕಗಳವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಮೂಲ ಯೋಜನೆಯಂತೆ ಕಾರ್ಯನಿರ್ವಹಿಸಲಿವೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸೇರಿ 3 ರಾಜ್ಯ, 7 ಜಿಲ್ಲೆಗಳನ್ನೊಳಗೊಂಡ 2 ಪ್ರಮುಖ ರೈಲು ಯೋಜನೆಗಳಿಗೆ ಕೇಂದ್ರ ಸಂಪುಟದ ಒಪ್ಪಿಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.