ETV Bharat / state

ಬೆಂಗಳೂರಿನಲ್ಲಿ ಹೈಡ್ರೋಪೋನಿಕ್ ಗಾಂಜಾ ಮಾರಾಟ: ಕೇರಳದ ಸಿವಿಲ್ ಇಂಜಿನಿಯರ್ ಸೆರೆ - HYDROPONIC CANNABIS SALE

ಕೇರಳದಿಂದ ಹೈಡ್ರೋಪೋನಿಕ್ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Accused Jijo Prasad
ಆರೋಪಿ ಜಿಜೋ ಪ್ರಸಾದ್ (ETV Bharat)
author img

By ETV Bharat Karnataka Team

Published : April 15, 2025 at 3:18 PM IST

1 Min Read

ಬೆಂಗಳೂರು: ಕೇರಳದಿಂದ ಹೈಡ್ರೋಪೋನಿಕ್ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಸೆರೆ ಹಿಡಿದಿದ್ದಾರೆ.

ನಗರದಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಜಿಜೋ ಪ್ರಸಾದ್ (25) ಬಂಧಿತ ಆರೋಪಿ. ಈತನಿಂದ 3 ಕೆ.ಜಿ 554 ಗ್ರಾಂ ಹೈಡ್ರೋಪೋನಿಕ್ ಗಾಂಜಾ, 26.06 ಲಕ್ಷ ನಗದು ಮತ್ತು ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಸ್ನೇಹಿತ ಪರಾರಿಯಾಗಿದ್ದು ಹುಡುಕಾಟ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Narcotic substance
ಪೊಲೀಸರು ವಶಕ್ಕೆ ಪಡೆದ ಮಾದಕ ಪದಾರ್ಥ (ETV Bharat)

ಬೊಮ್ಮಸಂದ್ರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಆರೋಪಿ, ಕೇರಳದಿಂದ ಹೈಡ್ರೋಪೋನಿಕ್ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ಬೆಂಗಳೂರಿಗೆ ತರುತ್ತಿದ್ದ. ಬೆಂಗಳೂರಿನಲ್ಲಿ ಸ್ನೇಹಿತನೊಂದಿಗೆ ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ ಮುಂತಾದ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಮಾದಕ ಪದಾರ್ಥಗಳ ಮಾರಾಟದ ಬಗ್ಗೆ ಯಾರಿಗೂ ಅನುಮಾನ ಬಾರದಿರಲು ಡಬಲ್ ಲೇಯರ್ ಏರ್‌ಟೈಟ್ ಪ್ಲಾಸ್ಟಿಕ್ ಕವರ್‌ಗಳಲ್ಲಿ 100 ಗ್ರಾಂನಂತೆ ಸಣ್ಣ ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ, ಬ್ಯಾಗ್‌ನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂಗೆ 12 ಸಾವಿರ ರೂಪಾಯಿ ಪಡೆಯುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ವಿದೇಶಿಗ: ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1 ಕೆ.ಜಿ ಎಂಡಿಎಂಎ ಕ್ರಿಸ್ಟಲ್, 1 ಮೊಬೈಲ್ ಫೋನ್, 1 ದ್ವಿಚಕ್ರ ವಾಹನ ಸೇರಿದಂತೆ ಒಂದು ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕ್ರಿಸ್ಟಿನ್ ಸೊಪುರುಚುಕ್ವು ಬಂಧಿತ ಆರೋಪಿ.

Christine Sopuruchukwu
ಆರೋಪಿ ಕ್ರಿಸ್ಟಿನ್ ಸೊಪುರುಚುಕ್ವು (ETV Bharat)

2012ರಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಈತ, ಮೋಜಿನ ಜೀವನಕ್ಕಾಗಿ ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ. ಒಂದು ಗ್ರಾಂಗೆ 20 ಸಾವಿರ ರೂ.ಯಂತೆ ಮಾರಾಟ ಮಾಡುತ್ತಿದ್ದ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯು ನಕಲಿ ದಾಖಲೆ ಸೃಷ್ಟಿಸಿಕೊಂಡು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ವಿದೇಶಿಗರ ಪ್ರಾದೇಶಿಕ ನೋಂದಣಿ ಕೇಂದ್ರ(ಎಫ್ಆರ್‌ಆರ್‌ಓ)ಕ್ಕೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರಲ್ಲಿ ₹13 ಲಕ್ಷ ಮೌಲ್ಯದ ಗಾಂಜಾ ವಶ: ಇಬ್ಬರು ಡ್ರಗ್ ಪೆಡ್ಲರ್​​ಗಳ ಬಂಧನ - GANJA SEIZED TUMAKURU

ETV Bharat Logo

Copyright © 2025 Ushodaya Enterprises Pvt. Ltd., All Rights Reserved.