ETV Bharat / state

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ನನಗೆ ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ: ಶೆಟ್ಟರ್​

author img

By ETV Bharat Karnataka Team

Published : Mar 20, 2024, 11:52 AM IST

Updated : Mar 20, 2024, 12:12 PM IST

ನನಗೆ ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Haveri Lok Sabha Constituency  Belagavi Lok Sabha Constituency  Lok Sabha Polls 2024  Lok Sabha Elections
ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ: ಜಗದೀಶ್ ಶೆಟ್ಟರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ

ಹುಬ್ಬಳ್ಳಿ: ''ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಕ್ಷೇತ್ರದ ಟಿಕೆಟ್ ನನಗೆ ಸಿಕ್ಕೇ ಸಿಗುತ್ತದೆ'' ಎಂದು ಮಾಜಿ ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿ ಟಿಕೆಟ್​ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ಅವರು ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ''ಎರಡು ದಿನಗಳೊಳಗೆ ಲಿಸ್ಟ್ ಬಿಡುಗಡೆಯಾಗುತ್ತೆ. ವರಿಷ್ಠರನ್ನು ನಾನು ಭೇಟಿಯಾಗಿದ್ದೇನೆ. ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆಯೂ ಚರ್ಚಿಸಿದ್ದೇನೆ. ಬಿಜೆಪಿ ಸ್ಥಳೀಯ ನಾಯಕರ ಜೊತೆಗೆ ಸಮಾಲೋಚನೆ ಮಾಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವಾಗಿದೆ. ಪ್ರಧಾನಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗುತ್ತೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದಾಗ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ವಿಶ್ವಾಸವಿದೆ'' ಎಂದರು.

''ಇನ್ನು ಎರಡು ದಿನದೊಳಗೆ ಟಿಕೆಟ್ ಫೈನಲ್ ಆಗುತ್ತೆ. ನಿನ್ನೆ (ಮಂಗಳವಾರ) ಮಧ್ಯಾಹ್ನ ಪ್ರಭಾಕರ ಕೋರೆ, ಕವಟಗಿಮಠ ಮೊದಲಾದವರ ಜೊತೆ ಚರ್ಚಿಸಿದ್ದೇನೆ. ಯಾರಿಗೇ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡೋಣ ಅಂತ ತೀರ್ಮಾನಿಸಿದ್ದೇವೆ. ನನಗೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಿದವರ ಬಗ್ಗೆ ಮಾತಾಡಲ್ಲ. ಹಾವೇರಿ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ವಿಚಾರ ಗೊತ್ತಿಲ್ಲ. ನಾನು ಅಥವಾ ಈಶ್ವರಪ್ಪ ಪುತ್ರ ಅಭ್ಯರ್ಥಿಯಾಗುತ್ತೇವೆ ಅನ್ನೋ ಮಾಹಿತಿ ಇಲ್ಲ'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ: ಮೈತ್ರಿಯಲ್ಲಿ ಸಮಸ್ಯೆ ಇಲ್ಲ, ಆಸ್ಪತ್ರೆಯಿಂದ ಬಂದ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆ: ಹೆಚ್​ಡಿಕೆ

Last Updated : Mar 20, 2024, 12:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.