ETV Bharat / state

ನಾನು ಫುಟ್ಬಾಲ್ ಅಲ್ಲ, ಯಾವುದೇ ಕಾರಣಕ್ಕೂ ಎಂಪಿ ಸ್ಥಾನಕ್ಕೆ ಸ್ಪರ್ಧೆ ಮಾಡಲ್ಲ: ಪ್ರಕಾಶ್​ ಹುಕ್ಕೇರಿ

author img

By ETV Bharat Karnataka Team

Published : Feb 1, 2024, 5:38 PM IST

Updated : Feb 1, 2024, 5:55 PM IST

ಚುನಾವಣೆ ಎನ್ನುವುದು ಫುಟ್ಬಾಲ್ ಮ್ಯಾಚ್ ತರಹ ಅಲ್ಲ, ನನ್ನ ಅವಧಿ ಇನ್ನೂ ಐದು ವರ್ಷ ಇದೆ. ವಿಧಾನಪರಿಷತ್ ಸದಸ್ಯನಾಗಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ.

Prakash Hukkeri spoke to the media.
ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಮಾಧ್ಯಮದವರ ಜೊತೆ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಮಾಧ್ಯಮದವರ ಜೊತೆ ಮಾತನಾಡಿದರು.

ಚಿಕ್ಕೋಡಿ: ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಫುಟ್ಬಾಲ್ ರೀತಿ ಬಳಸಿಕೊಳ್ಳಬಾರದು. ನಾನು ಯಾವುದೇ ಕಾರಣಕ್ಕೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್​ಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಎಚ್ಚರಿಕೆ ರವಾನಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಸಂತುಬಾಯಿ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಚರ್ಚೆಯಾಗ್ತಿದೆ. ಆದ್ರೆ ಯಾವುದೇ ಕಾರಣಕ್ಕೂ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೊದಲೊಮ್ಮೆ ಶಾಸಕ ಸ್ಥಾನದಲ್ಲಿ ಇದ್ದೆ, ರಾಜೀನಾಮೆ ಕೊಡಿಸಿ ಲೋಕಸಭೆಗೆ ಸ್ಪರ್ಧೆಗೆ ಇಳಿಸಿದರು. ಸದ್ಯ ನಾನು ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಕಾರ್ಯವನ್ನು ಮಾಡುತ್ತಿದ್ದೇನೆ. ಮತ್ತೆ ಲೋಕಸಭಾ ಸ್ಪರ್ಧೆ ಅಂದ್ರೆ ನನ್ನನ್ನು ಏನ್​ ಫುಟ್ಬಾಲ್ ರೀತಿ ತಿಳಿದಿದ್ದಾರೇನೋ? ನಾನು ಯಾವುದೇ ಕಾರಣಕ್ಕೂ ದೆಹಲಿ ರಾಜಕಾರಣ ಮಾಡುವುದಿಲ್ಲ ಎಂದು ತಿಳಿಸಿದರು.

ಚುನಾವಣೆ ಫುಟ್ಬಾಲ್ ಮ್ಯಾಚ್ ಅಲ್ಲ: ಶಿಕ್ಷಕರ ಮತಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ, ನನ್ನ ಅಧಿಕಾರಾವಧಿ ಆರು ವರ್ಷ ಇದೆ. ನನ್ನ ಆಯ್ಕೆ ಮತ್ತೆ ಚುನಾವಣೆಗೆ ನಿಲ್ಲೋದಕ್ಕೆ ಅಲ್ಲ, ಚುನಾವಣೆ ಎಂಬುದು ಫುಟ್ಬಾಲ್ ಮ್ಯಾಚ್ ರೀತಿ ಅಲ್ಲ, ನನ್ನ ಅವಧಿ ಇನ್ನೂ ಐದು ವರ್ಷ ಇದೆ. ವಿಧಾನಪರಿಷತ್ ಸದಸ್ಯನಾಗಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದೇನೆ. 12 ರಿಂದ 13 ಕೋಟಿ ರೂಪಾಯಿಯನ್ನು ಈಗಾಗಲೇ ಶಿಕ್ಷಕರ ಏಳ್ಗೆಗಾಗಿ ಖರ್ಚು ಮಾಡಲಾಗಿದೆ. ವಾಯವ್ಯ ಶಿಕ್ಷಕರ ಮತಕ್ಷೇತ್ರ ದೊಡ್ಡದಾಗಿರುವುದರಿಂದ ಇಲ್ಲಿ ಶಿಕ್ಷಕರ ಕೊಂದುಕೊರತೆಗಳು ಬಹಳಷ್ಟಿವೆ. ಅವರ ಕೆಲಸಗಳನ್ನು ಮಾಡುತ್ತ ನಾನು ಮುಂದುವರೆಯುತ್ತೇನೆ. ಯಾವುದೇ ಕಾರಣಕ್ಕೂ ನಾನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಸ್ಪರ್ಧೆ ಮಾಡುವವರು ಮಾಡ್ಲಿ ಎಂದು ಹೇಳಿದರು.

ಸಿಎಂ ಹೇಳಿದ್ರು ಲೋಕಸಭೆಗೆ ಸ್ಪರ್ಧೆ ಮಾಡುವದಿಲ್ಲ: ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧೆ ಮಾಡು ಅಂತ ಹೇಳಿದ್ರು ನಾನು ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ನಾನು ಯಾವುದೇ ಲಿಖಿತ ರೂಪದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಬರೆದುಕೊಟ್ಟಿಲ್ಲ. ಆ ರೀತಿ ಯಾವುದೇ ನಿಯಮಗಳು ಕೂಡ ಇಲ್ಲ, ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ನಾನು ವಾಯವ್ಯ ಮತಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೇನೆ, ವಿಧಾನಪರಿಷತ್ ಸದಸ್ಯರಾಗಿ ನಾನು ಮುಂದುವರೆಯುತ್ತೇನೆ. ನಾನು ಯಾವುದೇ ಪರಿಸ್ಥಿತಿ ಬಂದರೂ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಯಾವುದೇ ಪರಿಸ್ಥಿತಿಯಲ್ಲೂ ಎಷ್ಟೇ ಒತ್ತಡ ಬಂದರೂ, ನಾನು ಶಿಕ್ಷಕರ ಮತಕ್ಷೇತ್ರದಲ್ಲಿ ಮುಂದುವರಿಯುತ್ತೇನೆ ಎಂದರು.

ಇದನ್ನೂಓದಿ:ಉಚ್ಚಾಟಿತ ಹಿರಿಯ ಮುಖಂಡ ಮಾರೇಗೌಡರಿಗೆ ಬಾಗಿಲು ತೆರೆದ ಬಿಜೆಪಿ

Last Updated : Feb 1, 2024, 5:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.