ETV Bharat / state

ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ

author img

By ETV Bharat Karnataka Team

Published : Mar 19, 2024, 10:44 AM IST

Updated : Mar 19, 2024, 12:09 PM IST

Etv Bharat
Etv Bharat

ಬೆಂಗಳೂರಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಹೈದರಾಬಾದ್ ಮೂಲದ ಫುಡ್ ಸಂಸ್ಥೆಯೊಂದರ ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೇಘನಾ ಫುಡ್ಸ್​ ಗ್ರೂಪ್ ಒಡೆತನದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಮೇಘನಾ ಫುಡ್ಸ್ ಶಾಖೆಗಳು ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಪರಿಶೀಲನೆ ನಡೆಯುತ್ತಿದೆ.

ಮೇಘನಾ ಫುಡ್ಸ್ ಕಂಪನಿ ನಗರದ ವಿವಿಧೆಡೆ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು: ಸಿಐಡಿಯಿಂದ ತನಿಖೆ ನಡೆಸಲ್ಪಟ್ಟ ಮೂರು ಪ್ರಕರಣಗಳಿಗೆ ಒಂದೇ ವಾರದಲ್ಲಿ ಶಿಕ್ಷೆ ಪ್ರಕಟ

Last Updated :Mar 19, 2024, 12:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.