ETV Bharat / state

ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ - DK Shivakumar

author img

By ETV Bharat Karnataka Team

Published : May 14, 2024, 3:29 PM IST

ಭಾರತದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದ್ದು ನಮ್ಮದೆ ಸರ್ಕಾರ ರಚೆನೆ ಆಗಲಿದೆ ಎಂದು ಡಿಸಿಎಂ ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಬೆಂಗಳೂರು: ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಎಲ್ಲಾ ರಿವರ್ಸ್ ಆಗಬಹುದು ಎಂದರು.‌

ಹೆಚ್​.ಡಿ ರೇವಣ್ಣ ಅವರ ಪ್ರಕಣದಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ, ವಿಡಿಯೋ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಇದಕ್ಕೆ ಎಸ್​ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಪ್ರಸಾರ ಮಾಡುತ್ತವೆ ಅಂತ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಬಳಸಿ ತಿಮಿಂಗಲ ಪದಕ್ಕೆ ತಿರುಗೇಟು ನೀಡಿದರು.

ಪೆನ್​ಡ್ರೈವ್​ ಪ್ರಕರಣ ಡಿ.ಕೆ. ಶಿವಕುಮಾರ್ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್​ ಅಶೋಕ್ ಮತ್ತು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಇದಕ್ಕೆಲ್ಲಾ ಉತ್ತರ ಕೊಡೋಣ ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮಹಾರಾಷ್ಟ್ರ ರೀತಿಯಲ್ಲಿ ಆಪರೇಷನ್ ಆಗುತ್ತದೆ: ಸಿಎಂ ಏಕನಾಥ್​ ಶಿಂಧೆ - CM Eknath Shinde

ETV Bharat Logo

Copyright © 2024 Ushodaya Enterprises Pvt. Ltd., All Rights Reserved.