ETV Bharat / state

ಆರ್​​ಸಿಬಿ, ಕೆಎಸ್​ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ; ನ್ಯಾ.​ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ - BENGALURU STAMPEDE CASE

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

JUSTICE MICHAEL CUNHA  BENGALURU  RCB STAMPEDE  CM SIDDARAMAIAH A ONE MEMBER COMMISSION FORMED IN THE BENGALURU STAMPEDE CASE
ಮುಖ್ಯಮಂತ್ರಿ ಸಿದ್ದರಾಮಯ್ಯ, ಇತರರಿಂದ ಸುದ್ದಿಗೋಷ್ಠಿ (ETV Bharat)
author img

By ETV Bharat Karnataka Team

Published : June 6, 2025 at 7:25 AM IST

Updated : June 6, 2025 at 7:49 AM IST

1 Min Read

ಬೆಂಗಳೂರು: ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುಃಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಬುಧವಾರ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಮತ್ತೆ ವಿಶೇಷ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ, ಹೈಕೋರ್ಟ್​ನ ನಿವೃತ್ತ ನ್ಯಾಯಾಧೀಶರು ನ್ಯಾಯಮೂರ್ತಿ​ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್​​ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್​ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ ಎಂದು ತಿಳಿಸಿದರು.

ಆರ್​​ಸಿಬಿ, ಕೆಎಸ್​ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ (ETV Bharat)

ನಗರ ಪೊಲೀಸ್ ಆಯುಕ್ತರು ಸೇರಿ ಹಲವು ಹಿರಿಯ ಅಧಿಕಾರಿಗಳ ಅಮಾನತು: ಕಬ್ಬನ್ ಪಾರ್ಕ್ ಠಾಣೆ ಇನ್ಸ್​ಪೆಕ್ಟರ್​ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್​ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದೆ ಎಂದು ಹೇಳಿದರು.

ಘಟನೆ ನಮ್ಮನ್ನು ಘಾಸಿಗೊಳಿಸಿದೆ: ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂಬ ಬೆಂಬಲ ನೀಡಿದರು.

ಸಂಸ್ಥೆಗಳ ವಿರುದ್ಧದ ತನಿಖೆ ಸಿಐಡಿಗೆ: ಈಗಾಗಲೇ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್​ ತನಿಖೆ ಪ್ರಾರಂಭವಾಗಿದೆ. ಈ ಮಹಾ ದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಹೇಳಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​​, ಸಚಿವರಾದ ಹೆಚ್.ಕೆ.ಪಾಟೀಲ್, ಸುಧಾಕರ್, ಮಹದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಕಾಲ್ತುಳಿತ ದುರಂತದ ಬಗ್ಗೆ ಸಂಪುಟ ಸಭೆಯಲ್ಲಿ ನೋವು ವ್ಯಕ್ತಪಡಿಸಿದ ಸಿಎಂ: ಸಚಿವ ಹೆಚ್​.ಕೆ.ಪಾಟೀಲ್

Last Updated : June 6, 2025 at 7:49 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.