ETV Bharat / state

ರಾಜ್ಯಾದ್ಯಂತ ಪಕ್ಷದಿಂದ ಸದಸ್ಯತ್ವ ನೋಂದಣಿ ಮಾಡಲು ತೀರ್ಮಾನ: ಜಿ.ಟಿ.ದೇವೇಗೌಡ - JDS Core Committee

author img

By ETV Bharat Karnataka Team

Published : May 10, 2024, 7:52 AM IST

ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್​ ಕೋರ್​ ಕಮಿಟಿ ಸಭೆ ನಡೆದಿದ್ದು, ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆದಿದೆ.

ಜೆಡಿಎಸ್​ ಕೋರ್​ ಕಮಿಟಿ ಸಭೆ
ಜೆಡಿಎಸ್​ ಕೋರ್​ ಕಮಿಟಿ ಸಭೆ (ETV Bharat)

ಜೆಡಿಎಸ್​ ಕೋರ್​​​ ಕಮಿಟಿ ಸಭೆ (ETV Bharath)

ಬೆಂಗಳೂರು: ರಾಜ್ಯಾದ್ಯಂತ ನಮ್ಮ ಪಕ್ಷದಿಂದ ಸದಸ್ಯತ್ವ ನೋಂದಣಿ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಕೋರ್​​​ ಕಮಿಟಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈನಲ್ಲಿ ಚುನಾವಣೆಗಳು ಬರುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಘಟಕಗಳು ಕೂಡ ಸದಸ್ಯತ್ವ ನೋಂದಣಿ ಮಾಡಲು ಪ್ರಾರಂಭ ಮಾಡಬೇಕು ಎಂದು ಕರೆ ನೀಡಿದರು.

ಮುಂದುವರೆದು, "ಈಗಾಗಲೇ ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ತಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಬೆಂಬಲ ನೀಡಿದ್ದಾರೆ. ಎಷ್ಟೇ ಹಣಕಾಸಿನ ತೊಂದರೆ ಇದ್ದರೂ ಕೆಲಸ ಮಾಡಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದ ನಾಯಕರು ಸಹ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಒಬ್ಬರು, ಇಬ್ಬರು ನಾಯಕರನ್ನು ಬಿಟ್ಟರೆ ಪಕ್ಷದ ಎಲ್ಲಾ ನಾಯಕರು ಕೆಲಸ ಮಾಡಿದ್ದಾರೆ. ಬಿಜೆಪಿಯ 25 ಹಾಗೂ ಜೆಡಿಎಸ್​ನ 3 ಅಭ್ಯರ್ಥಿಗಳ ಪರ ಒಗ್ಗಟ್ಟಾಗಿ ಕೆಲಸ‌ ಮಾಡಿದ್ದೇವೆ. ಎಲ್ಲರಿಗೂ ಸಂತೋಷ ಆಗಿದೆ" ಎಂದು ಜಿ.ಟಿ.ದೇವೇಗೌಡ ಹೇಳಿದರು.

ಇದಕ್ಕೂ ಮುನ್ನ ನಡೆದ ಕೋರ್​ ಕಮಿಟಿ ಸಭೆಯಲ್ಲಿ ಹಾಸನ ಪೆನ್​ ಡ್ರೈವ್ ಪ್ರಕರಣ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಂಧನ ಹಾಗೂ ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಅದೇ ರೀತಿ ಮುಂಬರುವ ವಿಧಾನಪರಿಷತ್​​ ಚುನಾವಣೆ ಹಾಗೂ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಬಂದಿದೆ.

ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಿ.ಎಸ್ ಪುಟ್ಟರಾಜು, ಸಾರಾ ಮಹೇಶ್, ವೆಂಕಟರಾವ್ ನಾಡಗೌಡ, ಅಲ್ಕೋಡ್ ಹನುಮಂತಪ್ಪ, ಶಾಸಕರಾದ ನೇಮಿರಾಜ್ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಬೋಜೆಗೌಡ, ಟಿ.ಎ. ಶರವಣ, ಮಂಜೇಗೌಡ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ನೊಂದ ಮಹಿಳೆಯರಿಗೆ ಎಸ್ʼಐಟಿಯಿಂದ ಬೆದರಿಕೆ, ಕೆಲವೇ ತಿಂಗಳಲ್ಲಿ ರಾಜ್ಯ ಸರ್ಕಾರ ಧ್ವಂಸ: ಹೆಚ್​​ಡಿಕೆ ಕೆಂಡಾಮಂಡಲ - Pen drive sharing case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.