ETV Bharat / state

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಏ.17ರಂದು ರಾಜ್ಯದಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಡಿಸಿಎಂ ಡಿಕೆಶಿ - CONGRESS PROTEST

ರಾಜ್ಯ ಬಿಜೆಪಿಯ ದ್ವಂದ್ವ ನಿಲುವು ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಇದೇ 17ಕ್ಕೆ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

BENGALURU  BJP  ಬಿಜೆಪಿಯ ದ್ವಂದ್ವ ನಿಲುವು  DK SHIVAKUMAR
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)
author img

By ETV Bharat Karnataka Team

Published : April 11, 2025 at 9:42 AM IST

5 Min Read

ಬೆಂಗಳೂರು: "ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏಪ್ರಿಲ್​ 17ರಂದು ರಾಜ್ಯದ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್​​ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. "ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?" ಎಂದು ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

"ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಯಾತ್ರೆ" ಎಂದು ಕುಹಕವಾಡಿದರು.

ಕೇಂದ್ರ ಬಿಜೆಪಿಯಿಂದ ರಾಜ್ಯ ಬಿಜೆಪಿಗೆ ಗಿಫ್ಟ್: "ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್​ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಏರಿಸಿ ಉದ್ಘಾಟನೆ ಮಾಡಿ‌, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರೂ ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು" ಎಂದು ಟೀಕಿಸಿದರು.

"ಬುಧವಾರದಂದು ಕಚ್ಚಾ ತೈಲದ ಬೆಲೆ ಶೇ.4.23ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್​ನ ಮೂಲ ದರ ಪ್ರತಿ ಲೀಟರ್​ಗೆ 42.60 ಪೈಸೆ ಇದೆ. ದೇಶದಾದ್ಯಂತ ಪ್ರತಿ ಲೀಟರ್ ಪೆಟ್ರೋಲ್ ‌103 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಒಂದು ಲೀಟರ್​ಗೆ 60 ರೂ. ಲಾಭ ಸರ್ಕಾರಕ್ಕೆ ಸಿಗುತ್ತಿದೆ. ಡೀಸಲ್​ ಬೆಲೆ 91 ರೂ.ಇದೆ. 43 ರೂ. ಲಾಭ ಮಾಡುತ್ತಿದ್ದಾರೆ. ಶೇಕಡ 60ರಷ್ಟು ತೆರಿಗೆ ಪೆಟ್ರೋಲ್​, ಡೀಸೆಲ್​ ಮೇಲೆ ಹಾಕಿದ್ದಾರೆ" ಎಂದರು.

BENGALURU  BJP  ಬಿಜೆಪಿಯ ದ್ವಂದ್ವ ನಿಲುವು  DK SHIVAKUMAR
ಕ್ವೀನ್ಸ್​​ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿ (ETV Bharat)

"ನಮ್ಮ ಸರ್ಕಾರ ರೈತರ ಬದುಕನ್ನು ಉಳಿಸಲು ಹಾಲಿನ ದರ ಏರಿಕೆ ಮಾಡಿದ್ದೇವೆ. ಶಾಸಕರಾದ ವಿನಯ್ ಕುಲಕರ್ಣಿ ಅವರು ಪಶುಸಂಗೋಪನೆ ಮಾಡುತ್ತಿದ್ದಾರೆ. ಎಷ್ಟು ಖರ್ಚು ವೆಚ್ಚಗಳು ಹೆಚ್ಚಾಗಿವೆ ಎಂದು ಅವರನ್ನೇ ಕೇಳಬೇಕು. ಬಿಜೆಪಿಯವರು ಜಾನುವಾರುಗಳ ಬೂಸಾ, ಹಿಂಡಿ ಬೆಲೆಯನ್ನು ಏಕೆ ಕಡಿಮೆ ಮಾಡಿಸಲಿಲ್ಲ" ಎಂದು ಪ್ರಶ್ನಿಸಿದರು.

"ಹಾಲಿನ ದರ ನಮ್ಮ ರಾಜ್ಯದಲ್ಲಿ ಅತ್ಯಂತ ಕಡಿಮೆಯಿದೆ. ಕರ್ನಾಟಕದಲ್ಲಿ 42 ರೂಪಾಯಿ ಇದ್ದರೆ, ಕೇರಳ 52 ರೂ., ಗುಜರಾತ್ 53 ರೂ., ದೆಹಲಿ 55 ರೂ., ಮಹಾರಾಷ್ಟ್ರ 52 ರೂ., ತೆಲಂಗಾಣ 58 ರೂ., ಅಸ್ಸಾಂ 60 ರೂ., ಹರಿಯಾಣ 56 ರೂ., ರಾಜಸ್ಥಾನ 50 ರೂ., ಮಧ್ಯಪ್ರದೇಶ 52 ರೂ., ಪಂಜಾಬ್ 56 ರೂ., ಉತ್ತರ ಪ್ರದೇಶ 56 ರೂಪಾಯಿ ಬೆಲೆಯಿದೆ" ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ಮೂಲಕ ರೂ.52 ಸಾವಿರ ಕೋಟಿ ಮೀಸಲು:"ನೀರಿನ ಬೆಲೆ ಏರಿಕೆಯನ್ನು ಅತ್ಯಂತ ಕಡಿಮೆ ಮಾಡಿದ್ದೇವೆ. ಕಸ ಸಂಗ್ರಹಣೆ ಶುಲ್ಕವನ್ನು ಈ ಹಿಂದಿನ ಬಿಜೆಪಿ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ನಿಗದಿ ಮಾಡಿ ಬಡವರ ಪರವಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನರ ಬದುಕು ಹಸನಾಗಲಿ ಎಂದು ಗ್ಯಾರಂಟಿ ಯೋಜನೆ ಮೂಲಕ ರೂ.52 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ".

"ಯುಪಿಎ ಸರ್ಕಾರದ ಅವಧಿಯಲ್ಲಿ ಚಿನ್ನದ ಬೆಲೆ ರೂ. 28 ಸಾವಿರವಿತ್ತು ಈಗ ರೂ.92 ಸಾವಿರವಿದೆ. 10 ಸಾವಿರವಿದ್ದ ಮೊಬೈಲ್ ದರ 30 ಸಾವಿರಕ್ಕೆ ಏರಿಕೆಯಾಗಿದೆ. ರೂ.13 ಸಾವಿರವಿದ್ದ 32 ಇಂಚಿನ ಟಿವಿ ರೂ.36 ಸಾವಿರವಾಗಿದೆ. 1.5 ಟನ್ ಸಾಮರ್ಥ್ಯದ ಎಸಿ ಬೆಲೆ ರೂ.25 ಸಾವಿರದಿಂದ ರೂ.44 ಸಾವಿರಕ್ಕೆ ಏರಿಕೆಯಾಗಿದೆ. ಫ್ರಿಡ್ಜ್ ಬೆಲೆ ರೂ. 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಾಗಿದೆ. ರೂ.59 ಇದ್ದ ಡಾಲರ್​ ಬೆಲೆ ಈಗ ರೂ. 89 ಆಗಿದೆ. ಸಿಮೆಂಟ್ ಬೆಲೆ 268 ಇದ್ದಿದ್ದು ಈಗ ರೂ.410 ಕ್ಕೆ ಹೆಚ್ಚಳಗಿದೆ. ಈ ಬೆಲೆಯನ್ನೆಲ್ಲಾ ಯಾರೂ ನಿಯಂತ್ರಣ ಮಾಡುವವರು".

"ಕಬ್ಬಿಣದ ಬೆಲೆ ರೂ.16 ಸಾವಿರ, ಕಾರಿನ ಬೆಲೆಗಳಲ್ಲಿ ಊಹೆಗೂ ನಿಲುಕದ ಜಿಗತವಾಗಿದೆ. ರೂ. 1.5 ಲಕ್ಷಕ್ಕೆ ಸಿಗುತ್ತಿದ್ದ ಮಿನಿ ಟ್ರಾಕ್ಟರ್ ಬೆಲೆ ರೂ. 5 ಲಕ್ಷಕ್ಕೆ ಏರಿಕೆಯಾಗಿದೆ. ಫಾರ್ಚೂನರ್ ಕಾರಿನ ಬೆಲೆ 25 ಲಕ್ಷದಿಂದ 45 ಲಕ್ಷಕ್ಕೆ ಏರಿಕೆಯಾಗಿದೆ" ಎಂದು ವಿವಿಧ ಅಗತ್ಯ ವಸ್ತುಗಳು ಹಾಗೂ ವಾಹನಗಳ ಬೆಲೆಯ ಪಟ್ಟಿಯನ್ನು ಡಿಸಿಎಂ ಓದಿದರು.

ಎಲ್ಲದಕ್ಕೂ ಶುಲ್ಕ ವಿಧಿಸಿ ಸುಲಿಗೆ:" 80ರೂ. ಇದ್ದ ಹೆದ್ದಾರಿ ಟೋಲ್ ಬೆಲೆ 250ಕ್ಕೂ ಹೆಚ್ಚಾಗಿದೆ. ಇದೆಲ್ಲವು ಅಶೋಕ್​ ಅವರಿಗೆ ಕಾಣಿಸುತ್ತಿಲ್ಲವೇ? ಹಾಲಿನ ದರ ಏರಿಕೆ ವಿರೋಧಿಸುವ ನೀವು ರೈತ ವಿರೋಧಿಗಳು. ಬ್ಯಾಂಕ್​ಗಳಲ್ಲಿ ಹಣ ಕಟ್ಟಲು, ಬಿಡಿಸಲು, ಚೆಕ್ ಬುಕ್ ತೆಗೆದುಕೊಳ್ಳಲು ಹೀಗೆ ಎಲ್ಲದಕ್ಕೂ ಶುಲ್ಕ ವಿಧಿಸಿ ಸುಲಿಗೆ ಮಾಡಲಾಗುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ಹೇಳುತ್ತಿದ್ದರು".

"ಬಿಜೆಪಿಯವರು ಪ್ರತಿಭಟನಾ ಬ್ಯಾನರ್​ನಲ್ಲಿ ನನ್ನ ಹಾಗೂ ಸಿದ್ದರಾಮಯ್ಯ ಅವರ ಫೋಟೋಗಳನ್ನು ಹಾಕುವ ಬದಲು ಕೇಂದ್ರ ನಾಯಕರ ಫೋಟೋ ಹಾಕಿಕೊಳ್ಳಿ, ನಮ್ಮ ಬೆಲೆ ಏರಿಕೆ ಬದಲು ಬಿಜೆಪಿ ಬೆಲೆ ಏರಿಕೆಯನ್ನು ಪ್ರಶ್ನಿಸಿ. ನಿಮ್ಮ ಆಕ್ರೋಶ ನಿಮ್ಮ ನಾಯಕರ ಮೇಲಿರಲಿ, ಇದರಿಂದ ಜನರಿಗೆ, ಪಕ್ಷಕ್ಕೆ ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತಿದೆ ಎಂದು ವಿವರಿಸಬೇಕು" ಎಂದು ಡಿಕೆಶಿ ವ್ಯಂಗ್ಯವಾಡಿದರು.

"ಕೇಂದ್ರ ಬಿಜೆಪಿ ಸರ್ಕಾರದ ಜನಾಕ್ರೋಶ ಎಂದು ಬಿಜೆಪಿಯವರು ಯಾತ್ರೆ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸಬಾರದು. ಅಮೇರಿಕಾದ ಸುಂಕ ನೀತಿಯಿಂದ ದೇಶದ ಜನರಿಗೆ ಆಗಿರುವ ನಷ್ಟದ ಬಗ್ಗೆ ಏಕೆ ಯಾರೂ ಮಾತನಾಡುತ್ತಿಲ್ಲ. ಷೇರು ಪೇಟೆ ಮುಳುಗಿ ಹೋಗಿದೆ ಆದರೂ ಏಕೆ ಮಾತನಾಡುತ್ತಿಲ್ಲ" ಎಂದರು.

"ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್​ ಒನ್​ ಎನ್ನುವ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅದನ್ನು ಅವರು ಹೇಳಿಲ್ಲ ಎನ್ನುವ ಮರು ಹೇಳಿಕೆ ನೀಡಿದ್ದಾರಲ್ಲ. ಇದರ ಬಗ್ಗೆ ಅವರನ್ನು ಕರೆದು ಮಾತನಾಡುತ್ತೇನೆ. ಅವರ ಬಳಿ ಚರ್ಚೆ ನಡೆಸುತ್ತೇನೆ. ಬಿಲ್ ಪಾವತಿಗೆ ಕೆಲವು ಸಚಿವರು ವಿಳಂಬ ಮಾಡುತ್ತಿದ್ದಾರೆ".

ಎನ್​ಓಸಿಗೆ ಕಮಿಷನ್ ಕೇಳುತ್ತಿರುವುದರ ಬಗ್ಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, "ಇದರ ಬಗ್ಗೆ ಲೋಕಾಯುಕ್ತಕ್ಕೆ ಹಾಗೂ ಸರ್ಕಾರಕ್ಕೆ ದೂರು ನೀಡಲಿ. ನಮ್ಮ ಸರ್ಕಾರ ನ್ಯಾಯಬದ್ಧವಾಗಿ ಆಡಳಿತ ನೀಡುತ್ತೇವೆ. ನಾವು ಯಾವುದೇ ಲಂಚಕ್ಕೆ ಪ್ರೋತ್ಸಾಹ ನೀಡುವವರಲ್ಲ. ನನ್ನ ಇಲಾಖೆಯನ್ನು ಪ್ರಸ್ತಾಪ ಮಾಡಿರಬಹುದು. ಎಲ್ಲಾ ಇಲಾಖೆಗಳ ಬಗ್ಗೆಯೂ ದೂರು ನೀಡಿರಬಹುದು. ಗುತ್ತಿಗೆದಾರರು ದೂರು ನೀಡಲಿ. ನಮಗೆ ಬಿಲ್ ನೀಡಿ ಎಂದು ಕೇಳುತ್ತಾರೆ. ನಾವು ಶೇ. 10-20 ರಷ್ಟು ಬಿಲ್ ಬಿಡುಗಡೆ ಮಾಡಿರುತ್ತೇವೆ" ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಇತರೇ ಚರ್ಚೆಗಳ ಬಗ್ಗೆ ಡಿಕೆಶಿ, "ಯಾವುದೇ ಬದಲಾವಣೆಯಿಲ್ಲ. ಒಂದಷ್ಟು ಪದಾಧಿಕಾರಿಗಳನ್ನು ನೇಮಕ ಮಾಡುತ್ತಾರೆ. ಒಂದಷ್ಟು ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೆ. ಇದು ಹೊರತಾಗಿ ಯಾರೂ ಸಹ ಯಾವುದೇ ವಿಷಯವನ್ನು ನನ್ನ ಬಳಿ ಚರ್ಚೆ ಮಾಡಿಲ್ಲ" ಎಂದು ತಿಳಿಸಿದರು.

ಮುಂದುವರೆದು, 2ನೇ ವಿಮಾನ ನಿಲ್ದಾಣಕ್ಕೆ ಶಾಸಕರ ಪತ್ರದ ಬಗ್ಗೆ ಡಿಕೆಶಿ, "ನನಗೆ ಈ ಬಗ್ಗೆ ತಿಳಿದಿಲ್ಲ. ನನಗೆ ಇಡೀ ಕರ್ನಾಟಕವೇ ಒಂದು. ಚಾಮರಾಜನಗರ, ಬೀದರ್, ಗುಲ್ಬರ್ಗಾ ಎಲ್ಲವೂ ನನಗೆ ಒಂದೇ. ಒಂದಷ್ಟು ಜನ ತಮ್ಮ ಆಸೆ ಹೇಳಿಕೊಂಡಿದ್ದಾರೆ. ಅವರಲ್ಲಿ ಭೂಮಿ ಬೆಲೆ ಕಡಿಮೆಯಿದೆ ಆದ ಕಾರಣಕ್ಕೆ ಹೇಳಿರಬಹುದು. ಇದರ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡುತ್ತದೆ ಹೊರತು ನಾವಲ್ಲ" ಎಂದು ಹೇಳಿದರು.

ಎಐಸಿಸಿ ಅಧಿವೇಶನದಲ್ಲಿ ರಾಯಚೂರಿನ ಸಾಮಾನ್ಯ ಕಾರ್ಯಕರ್ತನಿಗೆ ಮಾತನಾಡಲು ಅವಕಾಶ ಸಿಕ್ಕಿತು ನಿಮಗೆ ಸಿಕ್ಕಿಲ್ಲ ಎಂದು ಕೇಳಿದಾಗ, "ಯಾರು ಹೇಳಿದವರು.‌ ನಾವು ಆಂತರಿಕ ಸಭೆಯಲ್ಲಿ ಮಾತನಾಡಿದ್ದೇವೆ. ಅದನ್ನೆಲ್ಲಾ ನೇರಪ್ರಸಾರ ಮಾಡಲು ಆಗುತ್ತದೆಯೇ? ಮುಖ್ಯಮಂತ್ರಿಯವರು ರಾಜ್ಯದ ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ. ನಾವೆಲ್ಲರೂ ಕಾರ್ಯಕಾರಿ ಸಮಿತಿಯ ಸದಸ್ಯರು. ವೀರಪ್ಪ ಮೊಯಿಲಿ ಅವರು, ಶ್ರೀನಿವಾಸ್ ಸೇರಿದಂತೆ ಅನೇಕರು ಮಾತನಾಡಿದ್ದಾರೆ" ಎಂದು ಹೇಳಿದರು.

ಸಿಎಂ ವಿರುದ್ಧ ಸುಳ್ಳು ಆರೋಪ: ಮುಖ್ಯಮಂತ್ರಿಗಳ ವಿರುದ್ಧ ಗಣಿ ಗುತ್ತಿಗೆ ಕಿಕ್​ ಬ್ಯಾಕ್​​ ಪಡೆದ ಆರೋಪದಕ್ಕೆ ಡಿಸಿಎಂ, "ರಾಜಕೀಯವಾಗಿ ಆರೋಪ ಮಾಡಲು ಪ್ರಯತ್ನ ಮಾಡುತ್ತಿರಬಹುದು. ಇದರಲ್ಲಿ ಯಾವುದೇ ಸತ್ಯವಿಲ್ಲ. ಕಾನೂನಿನ ಚೌಕಟ್ಟು ಬಿಟ್ಟು ಯಾರೂ ಈ ರೀತಿ ಮಾಡಲು ಆಗುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಎಲ್ಲವು ಸುಳ್ಳು ಆರೋಪ" ಎಂದು ತಿಳಿಸಿದರು.

ಇದನ್ನೂ ಓದಿ: ರಾಜಕೀಯ ಚದುರಂಗದಾಟ, ದಿನನಿತ್ಯ ದಾಳ ಉರುಳಿಸುತ್ತಿರುತ್ತೇವೆ: ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.