ETV Bharat / state

ನೇಮಕಾತಿ ಮೀಸಲಾತಿ ಶೇ.56ಕ್ಕೆ ಹೆಚ್ಚಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಕೆಎಟಿ - KAT CANCELS RESERVATION ORDER

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಪಡಿಸಿದೆ.

kat-cancels-government-order-increasing-government-recruitment-reservation
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : June 5, 2025 at 8:16 AM IST

3 Min Read

ಬೆಂಗಳೂರು: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣ ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರದ ಆದೇಶದ ಆಧಾರದ ಮೇಲೆ ಕರ್ನಾಟಕ ಲೋಕಸೇವಾ ಆಯೋಗವು 2024ರ ಫೆ.26ರಂದು ಹೊರಡಿಸಿದ್ದ 384 ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಅಧಿಸೂಚನೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ರದ್ದುಪಡಿಸಿ ಆದೇಶಿಸಿದೆ.

ಈ ಆದೇಶದಿಂದ ಕೆಎಎಸ್ ಅಧಿಕಾರಿಗಳ ನೇಮಕ ಮತ್ತೆ ಅತಂತ್ರಕ್ಕೆ ಸಿಲುಕಿದ್ದು, ಇದೀಗ ಸರ್ಕಾರದ ಮುಂದಿನ ನಡೆಯ ಮೇಲೆ ಆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ.ಎನ್. ಮಧು ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಅಧ್ಯಕ್ಷ ನ್ಯಾ. ಆರ್.ಬಿ. ಬೂದಿಹಾಳ್ ಹಾಗೂ ಆಡಳಿತ ಸದಸ್ಯ ರಾಘವೇಂದ್ರ ಔರಾದ್ಕರ್ ಅವರಿದ್ದ ನ್ಯಾಯಪೀಠ ಕಳೆದ ಮೇ 28ರಂದು ಈ ಆದೇಶ ಮಾಡಿದೆ.

ಕೆಎಎಸ್ ಹುದ್ದೆಗಳ ಭರ್ತಿ ಜೊತೆಗೆ 2022ರ ಡಿ.12ರಂದು ಸರ್ಕಾರ ಮೀಸಲು ಹೆಚ್ಚಳಕ್ಕೆ ಹೊರಡಿಸಿದ್ದ ಆದೇಶವನ್ನು ಸಹ ಕೆಎಟಿ ರದ್ದುಗೊಳಿಸಿ, ಪ್ರತಿವಾದಿ ಕೆಪಿಎಸ್​ಸಿಯು ಕಾನೂನು ಪ್ರಕಾರ ನೇಮಕಕ್ಕೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಸ್ವತಂತ್ರವಿದೆ ಎಂದು ಪೀಠ ಸ್ಪಷ್ಟಪಡಿಸಿದೆ.

ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಮುಖ್ಯ ಪರೀಕ್ಷೆ ನಡೆದು ಇನ್ನೇನು ಫಲಿತಾಂಶ ಹೊರಬೀಳಬೇಕಿತ್ತು. ಈ ಹಂತದಲ್ಲಿ ಹೊರಬಿದ್ದ ಕೆಎಟಿ ಆದೇಶವು ಅಭ್ಯರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ. ಇದೀಗ ಸರ್ಕಾರವು ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಬೇಕಾದರೆ, ಕೆಎಟಿ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿದೆ.

ಆದೇಶದಲ್ಲೇನಿದೆ: 2022ರ ಅ.23ರಂದು ಅಂದಿನ ರಾಜ್ಯ ಸರ್ಕಾರ (ಬಸವರಾಜ ಬೊಮ್ಮಾಯಿ ನೇತೃತ್ವದ) ಹೊರಡಿಸಿದ್ದ ಸುಗ್ರಿವಾಜ್ಞೆಯು ಮೀಸಲು ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದೆ. ಅದನ್ನು ಆಧರಿಸಿ 2022ರ ಡಿ.28ರಂದು ಸರ್ಕಾರಿ ಅಧಿಸೂಚನೆ ಪ್ರಕಟಿಸಿ ರೋಸ್ಟರ್ ಅಂಕಗಳನ್ನು ನಿಗದಿಪಡಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಶಾಸನಸಭೆಯ ಅನುಮತಿ ಪಡೆದಿಲ್ಲ. ಹಾಗಾಗಿ, ಅದರ ಆಧಾರದ ಮೇಲೆ ರಚಿಸಲಾದ 2023ರ ನಿಯಮಾವಳಿ ರಚನೆ ಊರ್ಜಿತವಲ್ಲ ಎಂದು ಕೆಎಟಿ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಇಂದಿರಾ ಸಾಹ್ನಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಒಟ್ಟು ಮೀಸಲು ಪ್ರಮಾಣ ಶೇ.50ರಷ್ಟು ಮೀರುವಂತಿಲ್ಲವೆಂದು ಮಿತಿ ಹೇರಿದೆ. ಆದಾದ ಬಳಿಕ ಈವರೆಗೆ ಸುಪ್ರೀಂ ಕೋರ್ಟ್​​​​ನ ಯಾವುದೇ ತೀರ್ಪಿನಲ್ಲಿ ಶೇ.50ರ ಮಿತಿ ದಾಟುವಂತೆ ಹೇಳಿಲ್ಲ. ಆದರೂ ಕೆಲವು ರಾಜ್ಯಗಳು ಮಾಡಿವೆ ಎಂಬುದನ್ನು ಮುಂದಿಟ್ಟುಕೊಂಡು ಮೀಸಲು ಮಿತಿ ಹೆಚ್ಚಳಕ್ಕೆ ಯಾವುದೇ ಶಾಸನಾತ್ಮಕ ಬೆಂಬಲ ಇಲ್ಲ ಎಂದೂ ತನ್ನ ಆದೇಶದಲ್ಲಿ ಕೆಎಟಿ ಹೇಳಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ರಾಜಕೀಯ ಕಾರಣಕ್ಕಾಗಿ ಸರ್ಕಾರ ಮೀಸಲು ಪ್ರಮಾಣ ಶೇ.56ಕ್ಕೆ ಹೆಚ್ಚಳ ಮಾಡಿದೆ. ಇದರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕೇವಲ ಶೇ.44ರಷ್ಟು ಮಾತ್ರ ಅವಕಾಶ ಸಿಗುತ್ತದೆ. ಅಲ್ಲದೆ, ಸಂವಿಧಾನಬದ್ಧವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಸಿಗಬೇಕಾದ ಅವಕಾಶ ಕಸಿದುಕೊಳ್ಳಲಾಗಿದೆ. ಇದು ಸುಪ್ರೀಂ ಕೋರ್ಟ್​​​​ನ ಸಂವಿಧಾನ ಪೀಠದ ಆದೇಶದ ಉಲ್ಲಂಘನೆಯಾಗಿದೆ. ಎಂ.ಆರ್.ಬಾಲಾಜಿ ವರ್ಸಸ್ ಸ್ಟೇಟ್ ಆಫ್ ಮೈಸೂರ್ ಪ್ರಕರಣದಲ್ಲಿ ಮೀಸಲಿಗೆ ಮಿತಿ ಇರಬೇಕೆಂಬ ಸುಪ್ರಿಂ ಕೋರ್ಟ್ ಆದೇಶದ ವಿರುದ್ಧ ನಿಯಮ ರೂಪಿಸಲಾಗಿದೆ'' ಎಂದು ಹೇಳಿದ್ದರು.

ಸರ್ಕಾರಿ ವಕೀಲರು, ''ಕರ್ನಾಟಕ ಶಾಸನಸಭೆ ರೂಪಿಸಿದ ಕಾಯ್ದೆಯನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆಯಾಗಿದ್ದು, ಅದಕ್ಕೆ ಮಾನ್ಯತೆ ಇಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಖಚಿತಪಡಿಸಿಕೊಂಡು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಆಯೋಗವು ವೈಜ್ಞಾನಿಕ ವರದಿ ನೀಡಿದ್ದು, ಈಗಾಗಲೇ ಹಲವಾರು ರಾಜ್ಯಗಳು ಜಾರಿಗೊಳಿಸಿದ ಮಾದರಿಯಲ್ಲಿ ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಮಾಣ ವಿಸ್ತರಿಸಲಾಗಿದೆ'' ಎಂದು ಸಮರ್ಥಿಸಿಕೊಂಡಿದ್ದರು.

ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 2022ರಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸೀಟು ಹಂಚಿಕೆ ಮೀಸಲು ಮತ್ತು ರಾಜ್ಯ ಸೇವೆಯಲ್ಲಿ ನೇಮಕ ಹುದ್ದೆಗಳಿಗೆ ಮೀಸಲು) ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.18ರಿಂದ ಶೇ.24ಕ್ಕೆ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿತ್ತು. ಅದನ್ನು ಆಧರಿಸಿ ಕರ್ನಾಟಕ ಸರ್ಕಾರಿ ಸೇವೆಯಲ್ಲಿ ರೋಸ್ಟರ್ ಮೀಸಲು ನಿಗದಿಪಡಿಸಿತ್ತು. ಇದರ ಆಧಾರದ ಮೇಳೆ ಕೆಪಿಎಸ್​​ಸಿಯು 384 ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಕೆಎಟಿ ಮೊರೆ ಹೋಗಿದ್ದರು.

ಇದನ್ನೂ ಓದಿ: ಸಿವಿಲ್‌ ಪ್ರಕರಣ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಅಸ್ತ್ರ ಬಳಸುವವರ ಬಗ್ಗೆ ಎಚ್ಚರ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.