ETV Bharat / state

ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ - K E Kantesh

author img

By ETV Bharat Karnataka Team

Published : Apr 30, 2024, 10:58 PM IST

ಸಿಟಿ ಸಿವಿಲ್ ಕೋರ್ಟ್​
ಸಿಟಿ ಸಿವಿಲ್ ಕೋರ್ಟ್​

ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರ ವಿರುದ್ಧ ಅಶ್ಲೀಲ ಫೋಟೊ, ವಿಡಿಯೊ, ಸ್ಕ್ರೀನ್ ಶಾಟ್ ಹಾಗು ಆಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯವು ಪ್ರತಿಬಂಧಕಾದೇಶ ನೀಡಿದೆ.

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವಿಡಿಯೊ, ಸ್ಕ್ರೀನ್ ಶಾಟ್ ಅಥವಾ ಅಶ್ಲೀಲ ಆಡಿಯೊಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಮಧ್ಯಂತರ ಏಕಪಕ್ಷೀಯ ಪ್ರತಿಬಂಧಕಾದೇಶ ಮಾಡಿದೆ. ಕೆ.ಇ.ಕಾಂತೇಶ್ ಸಲ್ಲಿಸಿರುವ ಅಸಲು ದಾವೆಯ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪಿ.ಕುಮಾರಸ್ವಾಮಿ ಈ ಆದೇಶ ಮಾಡಿದ್ದಾರೆ.

1ರಿಂದ 50ನೇ ಪ್ರತಿವಾದಿಗಳು, ಅವರ ಪ್ರತಿನಿಧಿಗಳು, ಸೇವಕರು, ಏಜೆಂಟರು, ಆಡಳಿತಗಾರರು, ಅವರು ನಿಯೋಜಿಸಿದವರು ಇತ್ಯಾದಿ ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿರುವಂತೆ ಯಾವುದೇ ತೆರನಾದ ಅಶ್ಲೀಲ ವಿಡಿಯೊ ಪ್ರಸಾರ/ಮದ್ರಣ/ಹಂಚಿಕೆ ಮಾಡದಂತೆ ಪ್ರತಿವಾದಿಗಳ ವಿರುದ್ಧ ಮಧ್ಯಂತರ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ಪ್ರತಿವಾದಿ ಮಾಧ್ಯಮಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.

ದೂರುದಾರರಾದ ಕಾಂತೇಶ್ ಪರ ವಕೀಲ ಎಂ.ವಿನೋದ್ ಕುಮಾರ್, ಪ್ರತಿವಾದಿಗಳು ಇಂಟರ್ನೆಟ್, ಟಿವಿ ಮಾಧ್ಯಮ, ಪತ್ರಿಕೆಗಳಲ್ಲಿ ದೂರುದಾರರ ವಿರುದ್ಧ ಆಕ್ಷೇಪಾರ್ಹವಾದ ಸುದ್ದಿ ಪ್ರಸಾರ/ಮುದ್ರಣ ಮಾಡುತ್ತಿದ್ದಾರೆ. ಮಾಧ್ಯಮಗಳು ದೂರುದಾರರ ವರ್ಚಸ್ಸಿಗೆ ಹಾನಿ ಮಾಡಲು ಯತ್ನಿಸುತ್ತಿವೆ. ಲೋಕಸಭಾ ಚುನಾವಣೆಯಂಥ ಮಹತ್ವದ ಸಂದರ್ಭದಲ್ಲಿ ಹೆಸರು ಕೆಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಫಿರ್ಯಾದಿಗೆ ಮಾನಹಾನಿಯಿಂದ ರಕ್ಷಣೆ ಅಗತ್ಯ. ಹೀಗಾಗಿ, ದೂರು ಇತ್ಯರ್ಥವಾಗುವವರೆಗೆ ಸಂಬಂಧಿತ ಮಾಧ್ಯಮಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಹಾಸನ ವಿಡಿಯೋ ಕೇಸಲ್ಲಿ ಕಾಂಗ್ರೆಸ್​ ಸರ್ಕಾರ ಇದುವರೆಗೂ ಯಾಕೆ ಕ್ರಮ ಜರುಗಿಸಿಲ್ಲ: ಅಮಿತ್​ ಶಾ - HASSAN PEN DRIVE CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.