ETV Bharat / state

40% ಕಮಿಷನ್ ಆರೋಪ: ಕೆಂಪಣ್ಣ ಅವರು ನಾಗಮೋಹನ್ ದಾಸ್ ಸಮಿತಿಗೆ ದೂರು ನೀಡಲಿ-ಸಿಎಂ

author img

By ETV Bharat Karnataka Team

Published : Feb 9, 2024, 4:31 PM IST

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಮಾಡಿರುವ ಕಮಿಷನ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಹೊಸದುರ್ಗದಲ್ಲಿ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ಭ್ರಷ್ಟಾಚಾರ ನಡೆಯುತ್ತಿದ್ದರೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ನಾಗಮೋಹನ್ ದಾಸ್ ಸಮಿತಿಗೆ ದೂರು ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಮ್ಮ ಸರ್ಕಾರದಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದ್ದರೆ ಸೂಕ್ತ ದಾಖಲೆ ನೀಡಲಿ. ಅಧಿಕಾರಿಗಳು ಲಂಚ ಕೇಳುತ್ತಾರೆಂದು ಹೇಳುತ್ತಿದ್ದಾರೆ. ಯಾವ ಅಧಿಕಾರಿಗಳೆಂದು ತಿಳಿಸಲಿ, ಅಂಥವರ ವಿರುದ್ಧ ಸಮಿತಿಗೆ ದೂರು ನೀಡಲಿ ಎಂದರು.

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಕೊಲ್ಲುವ ಕಾನೂನು ತರಬೇಕೆಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ವಿಚಾರಕ್ಕೆ, ಹೊಡಿ, ಬಡಿ, ಕೊಲ್ಲು ಎಂಬ ಭಾಷೆ ಬಿಟ್ಟು ಈಶ್ವರಪ್ಪಗೆ ಬೇರೇನೂ ಗೊತ್ತಿಲ್ಲ. ಆರ್​​ಎಸ್​ಎಸ್​ ಟ್ರೈನಿಂಗ್ ಪಡೆದಿದ್ದೇನೆ ಅಂತಾರೆ. ಆದರೂ ಇಂತಹ ಭಾಷೆ ಮಾತನಾಡುತ್ತಾರೆ. ಈಶ್ವರಪ್ಪನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು, ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನೂ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಅನುದಾನದ ವಿಚಾರದಲ್ಲಿ ಸುಪ್ರೀಂ ಕೋರ್ಟ್​ಗೆ ಹೋಗುವ ಆಲೋಚನೆ ಮಾಡಿದ್ದೀರಾ ಎಂಬ ಪ್ರಶ್ನೆಗೆ, ನಾವು ಆ ರೀತಿ ಆಲೋಚನೆ ಮಾಡಿಲ್ಲ. ಆದರೆ, ಕಾರ್ನಾಟಕಕ್ಕೆ ಅನ್ಯಾಯ ಆಗಿದ್ದು ನಿಜ. ರಾಜ್ಯದಿಂದ ನಾವು 100 ರೂ. ತೆರಿಗೆ ವಸೂಲಿ ಮಾಡಿ ಕೇಂದ್ರಕ್ಕೆ ನೀಡುತ್ತೇವೆ. ಆದರೆ, ಕೇಂದ್ರ ನಮಗೆ ಮರಳಿ ಕೇವಲ 12 ರೂ ಮಾತ್ರ ನೀಡುತ್ತದೆ. ಇನ್ನುಳಿದ 88 ರೂ. ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನು ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ, ದೇಶ ವಿಭಜನೆ ಎನ್ನುತ್ತಾರೆ. ದೇಶ ವಿಭಜನೆ ಮಾಡಲು ಹೊರಟವರ್ಯಾರು ಮೋದಿ ಅಲ್ವಾ? ನಿಮಗೆ ಕನ್ನಡಿಗರಾಗಿ ಕೋಪ ಬರಲ್ವಾ ಎಂದು ರಾಜ್ಯ ಬಿಜೆಪಿ ಸಂಸದರನ್ನು ಪ್ರಶ್ನಿಸಿದರು.

ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಬಜೆಟ್​ನಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಿಸಿದ್ದಾರೆ. ಅವರು ಬಜೆಟ್​​ನಲ್ಲಿ ಹೇಳಿದ್ದಾರೆಯೇ ವಿನಃ ಒಂದು ರೂಪಾಯಿ ಕೂಡಾ ನಮಗೆ ಕೊಟ್ಟಿಲ್ಲ. ನಾನು ಕೂಡಾ ನೀರಾವರಿ ಮಂತ್ರಿಗಳನ್ನು ಕೇಳಿದ್ದೇನೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದಲ್ಲೂ ಅಧಿಕಾರಿಗಳು 40% ಕಮಿಷನ್ ಪಡೆಯುವುದು ಮುಂದುವರೆದಿದೆ: ಕೆಂಪಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.