ETV Bharat / state

ಮತ ಪ್ರಚಾರಕ್ಕೂ ಮುನ್ನ ಪಾದುಕೆ ದರ್ಶನ; ಬಳಿಕ ಬೀದಿ ಬದಿ ಬನ್ಸ್‌, ಟೀ ಸವಿದ ಕೋಟಾ ಶ್ರೀನಿವಾಸ್ ಪೂಜಾರಿ

author img

By ETV Bharat Karnataka Team

Published : Mar 17, 2024, 9:31 AM IST

Updated : Mar 17, 2024, 12:48 PM IST

ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸುವ ಮುನ್ನ ಕೋಟಾ ಶ್ರೀನಿವಾಸ್ ಪುಜಾರಿ ಅವರು ಚಿಕ್ಕಮಗಳೂರಿನ ದತ್ತ ಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದರು.

ಕೋಟಾ ಶ್ರೀನಿವಾಸ್ ಪೂಜಾರಿ
ಕೋಟಾ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಘೋಷಣೆಯಾದ ಬಳಿಕ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಇದೇ ಮೊದಲ ಬಾರಿ ಶನಿವಾರ ಜಿಲ್ಲೆಗೆ ಆಗಮಿಸಿದರು. ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುವ ಮುನ್ನ ದತ್ತ ಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ಮುಖಂಡರು ಜತೆಗಿದ್ದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು. "ಈಶ್ವರಪ್ಪ ಹಿರಿಯ ನಾಯಕರು. ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ. ಪಕ್ಷದ ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸಿ, ಎಲ್ಲ ಗೊಂದಲಗಳಿಗೆ ಪರಿಹಾರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ಸದ್ಯ ಚರ್ಚೆಗೆ ಅವಕಾಶ ಆಗಿರುವುದು ಸತ್ಯ. ಹಾವೇರಿ ಟಿಕೆಟ್ ಕಾಂತೇಶ್​ಗೆ ನೀಡಬೇಕು ಎಂಬುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನೂ ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ. ಪಕ್ಷ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸ ಆಗಿರಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ" ಎಂದರು.

ಇದನ್ನೂ ಓದಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 2 ಹಂತಗಳಲ್ಲಿ ಮತದಾನ; ಮೇ 7ರಂದು ಸುರಪುರ ವಿಧಾನಸಭಾ ಉಪ ಚುನಾವಣೆ

ಬೀದಿ ಬದಿ ಬನ್ಸ್, ಟೀ ಸೇವನೆ: ಇದಕ್ಕೂ ಮುನ್ನ, ಕೋಟಾ ಶ್ರೀನಿವಾಸ್ ಪೂಜಾರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ಬಳಿಕ ಕಾರ್ಯಕರ್ತರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ದತ್ತ ಪೀಠಕ್ಕೆ ಹೋಗುವ ದಾರಿ ಮಧ್ಯೆ ನಗರದ ಹನುಮಂತಪ್ಪ ವೃತ್ತದ ಬಳಿ ಕಾರ್ಯಕರ್ತರೊಂದಿಗೆ ಬೀದಿ ಬದಿ, ಬನ್ಸ್ ಹಾಗೂ ಟೀ ಸೇವಿಸಿದರು.

ಇದನ್ನೂ ಓದಿ: 7 ಹಂತಗಳಲ್ಲಿ ಲೋಕಸಭಾ ಚುನಾವಣೆ: ಜೂನ್​​ 4ಕ್ಕೆ ಫಲಿತಾಂಶ

Last Updated :Mar 17, 2024, 12:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.