ETV Bharat / state

ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಪಿ. ನಂಜುಂಡಿ - KP Nanjundi resigned

author img

By ETV Bharat Karnataka Team

Published : Apr 23, 2024, 10:35 AM IST

KP Nanjundi  Legislative Council  Basavaraj Horatti  Dharwad
ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಪಿ. ನಂಜುಂಡಿ

ಕೆ.ಪಿ. ನಂಜುಂಡಿ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕೆ.ಪಿ. ನಂಜುಂಡಿ ರಾಜೀನಾಮೆ ಪತ್ರ ಸ್ವೀಕರಿಸಿದರು.

ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ. ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ ನಿವಾಸಕ್ಕೆ ಭೇಟಿ ನೀಡಿದ ಕೆ.ಪಿ. ನಂಜುಂಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ.

ಕೆ.ಪಿ‌. ನಂಜುಂಡಿ ಹೇಳಿಕೆ: ರಾಜೀನಾಮೆ ನೀಡಿದ ನಂತರ ಕೆ.ಪಿ‌. ನಂಜುಂಡಿ ಮಾತನಾಡಿ, ''ನಿರ್ಲಕ್ಷ್ಯಕ್ಕೆ ಒಳಗಾದ‌ ಕಾಯಕ ಸಮಾಜದ ಏಳಿಗೆಗೆ ನಾನು ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದಿದ್ದೆ‌. ಆದರೆ ಮುಖಂಡರು ಒಂದೇ ಒಂದು ದಿವಸ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮಾಜಕ್ಕೆ ಏನೂ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು. ಏನೂ ಜವಾಬ್ದಾರಿ ಕೊಡಲಿಲ್ಲ. ರಾಜಿನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನಮ್ಮ ಬಗ್ಗೆ ನಿರ್ಲಕ್ಷ್ಯ ಮಾಡಿದ್ದಾರೆ. ನಮ್ಮ ಹೋರಾಟಕ್ಕೆ ಬೆಲೆಯಿಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಅದರ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತೇನೆ'' ಎಂದರು.

ಬಸವರಾಜ್ ಹೊರಟ್ಟಿ ಸಲಹೆ: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ''ಕೆ‌.ಪಿ. ನಂಜುಂಡಿ ರಾಜೀನಾಮೆ ಅಂಗೀಕರಿಸಿದ್ದೇನೆ. ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ. ನನ್ನ ಸಭಾಪತಿ ಅವಧಿಯಲ್ಲಿ 13 ಜನ ರಾಜಿನಾಮೆ ಕೊಟ್ಟಿದ್ದಾರೆ. ರಾಜಕೀಯದಲ್ಲಿ ಎಥಿಕ್ಸ್ ಈಗ ಕಡಿಮೆಯಾಗಿದೆ. ದುಡ್ಡು ಕೊಟ್ಟು, ತೆಗೆದುಕೊಂಡು ವೋಟ್​ ಹಾಕುವವರೆಗೆ ಪ್ರಜಾಪ್ರಭುತ್ವಕ್ಕೆ ಬೆಲೆಯಿಲ್ಲ. ಹಿಂದೆ ಸಂಗೀತಗಾರರು, ಸಾಹಿತಿಗಳು ಪರಿಷತ್‌ನಲ್ಲಿ ಇರುತ್ತಿದ್ದರು. ಹಣ, ತೋಳ್ಬಲದ ರಾಜಕೀಯ ನಡೆಯುತ್ತಿದೆ. ಯಾರಿಗೋ ಆಶ್ರಯ ಕಲ್ಪಿಸಲು ಕೆಲಸ ಮಾಡಬೇಕು. ಸಂವಿಧಾನ ದುರುಪಯೋಗ ಆಗಬಾರದು, ಗೌರವಿಸುವ ಕೆಲಸ ಮಾಡಬೇಕು'' ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಬರ ಪರಿಹಾರ ಹಣ ಬಿಡುಗಡೆಗೊಳಿಸದಿದ್ದರೆ ರಾಜ್ಯಕ್ಕೆ ಮತ ಕೇಳಲು ಬರಬೇಡಿ: ಬಿಜೆಪಿ ವಿರುದ್ಧ ಸುರ್ಜೇವಾಲಾ ಆಕ್ರೋಶ - Randeep Singh Surjewala

ETV Bharat Logo

Copyright © 2024 Ushodaya Enterprises Pvt. Ltd., All Rights Reserved.