ETV Bharat / state

ಸೆ.18ರಿಂದ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ KSRTC ಚಾಲನಾ ವೃತ್ತಿ ಪರೀಕ್ಷೆ - KSRTC Driving Test

2020ರಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿರುವವರು ಸೆ.18ರಿಂದ ಹುಮ್ನಾಬಾದ್​ ತರಬೇತಿ ಕೇಂದ್ರದಲ್ಲಿ ಪರೀಕ್ಷೆ ತೆಗೆದುಕೊಳ್ಳಬಹುದು.

author img

By ETV Bharat Karnataka Team

Published : Sep 13, 2024, 9:17 AM IST

ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ KSRTC ಚಾಲನಾ ವೃತ್ತಿ ಪರೀಕ್ಷೆ
ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ KSRTC ಚಾಲನಾ ವೃತ್ತಿ ಪರೀಕ್ಷೆ (IANS)

ಬೆಂಗಳೂರು: ಸೆಪ್ಟೆಂಬರ್​ 18ರಿಂದ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗುತ್ತಿದೆ. ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಭ್ಯರ್ಥಿಗಳಿಗೆ ಸೂಚಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಿಗಮ, 14-02-2020ರಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿದ್ದು, ಹುಮ್ನಾಬಾದ್​ ತರಬೇತಿ ಕೇಂದ್ರದಲ್ಲಿ ಪರೀಕ್ಷೆ ಪಡೆಯಲಿಚ್ಛಿಸಿರುವ ಅಭ್ಯರ್ಥಿಗಳಿಗೆ ಇದೇ ತಿಂಗಳ 18ರಿಂದ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗುತ್ತಿದೆ.

ಅಭ್ಯರ್ಥಿಗಳು ಸೆ.13ರಂದು ಮಧ್ಯಾಹ್ನ 1 ಗಂಟೆಯಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ಮೂಲಕ ಕರೆಪತ್ರ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ.

ಈ ನೇಮಕಾತಿ ಅಭ್ಯರ್ಥಿಗಳು ಗಣಕೀಕೃತ ಚಾಲನಾ ಪಥದಲ್ಲಿ ಗಳಿಸಿದ ಅಂಕಗಳು ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಮಾನವ ಹಸ್ತಕ್ಷೇಪ ಇರಲ್ಲ. ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು ಮತ್ತು ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದು ಎಂದು ತಿಳಿಸಿದೆ.

ಇದನ್ನೂ ಓದಿ: 'ಹುಬ್ಬಳ್ಳಿ-ಧಾರವಾಡದಲ್ಲಿ ನಿಡೆಕ್ ಕಂಪನಿಯಿಂದ ಹೆಚ್ಚುವರಿ ₹150 ಕೋಟಿ ಹೂಡಿಕೆ, 800 ಉದ್ಯೋಗ ಸೃಷ್ಟಿ' - Invest Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.