ಬೆಂಗಳೂರು: 'ನಮ್ಮ ಮೆಟ್ರೋ'ದ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದಲ್ಲಿ ಕಂಡುಬಂದಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದ್ದು, ರೈಲು ಸಂಚಾರವು ಸಾಮಾನ್ಯ ಸ್ಥಿತಿಗೆ ಮರಳಿದೆ.
ತಾಂತ್ರಿಕ ದೋಷ ಸರಿಪಡಿಸಲಾಗಿದ್ದು, ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 9.55ರಿಂದ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬೆಳಗ್ಗೆಯಿಂದಲೇ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. "ಬೆಳಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದಲ್ಲಿನ ವೈಟ್‌ಫೀಲ್ಡ್ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಲ್ಲಘಟ್ಟ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರೆಯಲಿವೆ" ಎಂದು ಬಿಎಂಆರ್‌ಸಿಎಲ್‌ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಸಾರ್ವಜನಿಕರಿಗೆ #BMRCL, ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್ನಿಂದ ಟ್ರೇನುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ👇🏻 pic.twitter.com/wTASel0vIf
— ನಮ್ಮ ಮೆಟ್ರೋ (@OfficialBMRCL) May 23, 2025
ಇದನ್ನೂ ಓದಿ: ರಾಮನಗರ 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರು