ETV Bharat / state

ಖಾತೆ ಬದಲಾಯಿಸುವಂತೆ ಸಿಎಂಗೆ ಕೇಳಿಲ್ಲ, ಇದು ಸುಳ್ಳು ಸುದ್ದಿ: ಸಚಿವ ಪರಮೇಶ್ವರ್​​ - G PARAMESHWAR

ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರ ಎಂದು ಸಚಿವ ಜಿ.ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

PARAMESHWAR
ಸಚಿವ ಪರಮೇಶ್ವರ್​​ (ETV Bharat)
author img

By ETV Bharat Karnataka Team

Published : June 9, 2025 at 1:23 PM IST

2 Min Read

ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಖಾತೆ ಬದಲಾವಣೆಯ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ಕುರಿತಂತೆ ನಿಮಗೆ ಯಾರು ಹೇಳಿದರು. ಒಂದು ವೇಳೆ ನಿಮ್ಮ ಕಿವಿಗೆ ಬಿತ್ತು ಅಥವಾ ಯಾರೋ ಹೇಳಿದರು‌ ಎಂಬ ಮಾತು ಬಂದಾಗ ನನ್ನನ್ನು ನೇರವಾಗಿ ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದಲ್ಲವೆ. ಸುದ್ದಿ ಮಾಡುವ ಮೊದಲು ನನ್ನನ್ನು ನೇರವಾಗಿ ಕೇಳಬಹುದಲ್ಲವೇ?. ನಾನು 30 ವರ್ಷದಿಂದ ನಿಮ್ಮೊಂದಿಗೆ ಸಂಯಮದಿಂದ ನಡೆದುಕೊಂಡಿದ್ದೇನೆ. ನೀವು ಅಷ್ಟೇ ಗೌರವಿಸಿದ್ದೀರಿ. ಇದಕ್ಕೆ ನಾನು ಅಭಾರಿಯಾಗಿದ್ದೇನೆ. ವ್ಯಕ್ತಿಯ ವ್ಯಕ್ತಿತ್ವವನ್ನು ನಾಶ ಮಾಡುವುದು ಸರಿಯಾಗಿ ಕಾಣಿಸುವುದಿಲ್ಲ, ಶೋಭೆ ತರುವುದಿಲ್ಲ ಎಂದು ಮಾಧ್ಯಮದವರಿಗೆ ಹೇಳಿದರು.

ಸಚಿವ ಪರಮೇಶ್ವರ್​​ (ETV Bharat)

ನಾನು ನನ್ನ ಶ್ರೀಮತಿಯವರು ಸೇರಿದಂತೆ ಯಾರ ಬಳಿಯೂ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಖಾತೆ ಬದಲಾಯಿಸುವಂತೆ ಆಪ್ತರ ಬಳಿ ಹೇಳಿದರು, ಮುಖ್ಯಮಂತ್ರಿಯವರ ಬಳಿ ಕೇಳಿದರು. ಅವರು ಸುಮ್ಮನೆ ಇರಿ ಎಂದರು ಎಂದೆಲ್ಲ ಸುದ್ದಿ ಮಾಡಲಾಗಿದೆ. ಇದನ್ನು ಯಾರು ಹೇಳಿದರು. ಸುದ್ದಿ ಮಾಡುವ ಮೊದಲೇ ಸ್ಪಷ್ಟನೆ ಪಡೆದುಕೊಳ್ಳಬೇಕಿತ್ತು. ನಮ್ಮನ್ನು ಅಭಿಮಾನಿಗಳು, ಜನ ಅನುಕರಿಸುವವರು ಇದ್ದಾರೆ. ಕ್ಷೇತ್ರದ ಮತದಾರರು ಏನೆಂದುಕೊಳ್ಳುತ್ತಾರೆ. ಮುಂದೆ ಈ ರೀತಿ ಊಹಾಪೋಹದ ಸುದ್ದಿ ನಿಮ್ಮ ಕಿವಿಗೆ ಬಿದ್ದಾಗ ನನ್ನನ್ನು ಕೇಳಿ ಸ್ಪಷ್ಟಪಡಿಸಿಕೊಳ್ಳಬಹುದು ಎಂದರು.

ನಾನು ಯಾವತ್ತು ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಬೆಂಗಳೂರಿನಲ್ಲಿ ದುರದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳಾಗಬಾರದು. ಈ ಘಟನೆಯಿಂದ ನಾವು ನೋವನ್ನು ಅನುಭವಿಸುತ್ತಿದ್ದೇವೆ. ಇಂತಹ ಸವಾಲುಗಳನ್ನು ಎದುರಿಸಬೇಕು. ಖಾತೆ ಬದಲಾಯಿಸುವಂತೆ ಮುಖ್ಯಮಂತ್ರಿಯವರು ಸೇರಿದಂತೆ ಯಾರ ಬಳಿಯೂ ಮಾತನಾಡೇ ಇಲ್ಲ. ಇದೆಲ್ಲ ಸತ್ಯಕ್ಕೆ ದೂರವಾಗಿದ್ದು. ಈ ವಿಚಾರವನ್ನು ಯಾರು ಕೂಡ ಗಣನೆಗೆ ತೆಗೆದುಕೊಳ್ಳಬಾರದು ಎಂದು ಗೃಹ ಸಚಿವರು ಮನವಿ‌ ಮಾಡಿದರು.

ಕಾಲ್ತುಳಿತ ಘಟನೆಯ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಾದ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ. ತನಿಖೆ ವೇಳೆ ನಮ್ಮನ್ನು ಕೇಳಿದರೆ ಹೇಳುತ್ತೇವೆ. ಈಗ ಹೇಳಿಕೆ ನೀಡಿದರೆ ತನಿಖೆಯ ದಿಕ್ಕು ಬೇರೆ ಕಡೆ ಹೋಗುತ್ತದೆ ಎಂದರು.

ಇನ್ನು ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ‌. ಸಭೆ ಕರೆಯಬೇಕು ಎಂದು ಹೇಳಿದ್ದಾರೆ‌. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿಯವರ 11 ವರ್ಷಗಳ ಆಡಳಿತಕ್ಕೆ ಝೀರೋ ಮಾರ್ಕ್ಸ್ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ: 'ಸಿದ್ದರಾಮಯ್ಯನವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ?'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.