ಮೈಸೂರು: ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಸಹ ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದರು. ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿಯಲ್ಲಿ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನೆಲೆ ದಾಳಿಯಾಗಿರುತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶ ಇರಬಾರದು ಎಂದರು.
ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಮಾತನಾಡಿ, ಇದು ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಪುನಾರಚನೆ ಬಗ್ಗೆ ನನ್ನ ಸಲಹೆ ಕೊಡಿ ಅಂತ ಕೇಳಿದರೇ ಕೊಡುತ್ತೇನೆ ಎಂದು ಹೇಳಿದರು.
ಕಳೆದ ವರ್ಷದ ದಸರಾ ಲೆಕ್ಕ ಕೊಡದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ, ಲೆಕ್ಕ ಕೊಡಿ ಅಂತ ಜಿಲ್ಲಾಡಳಿತಕ್ಕೆ ಕೇಳಿದ್ದೇನೆ. ಅದರಲ್ಲೇನು ಮುಚ್ಚು ಮರೆ ಇಲ್ಲ ಎಂದರು.
ಬೆಂಗಳೂರಿನ ಕಾಲ್ತುಳಿತ ಪ್ರಕರಣ ಸಂಬಂಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೊಂದು ಹೃದಯವಿದ್ರಾವಕ ಘಟನೆ ನಿರೀಕ್ಷೆಗೂ ಹೆಚ್ಚಿನ ಜನ ಸೇರಿದ್ದರಿಂದ ಈ ದುರಂತ ನಡೆದಿದೆ. ಈ ಘಟನೆ ಆಗಬಾರದಿತ್ತು ಆಗಿದೆ. ಆದರೆ, ಇಂತಹ ಘಟನೆಗಳು ಬೇರೆ ರಾಜ್ಯದಲ್ಲಿ ನಡೆದಾಗ ಯಾರಾದರೂ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರಾ ಎಂದು ಪ್ರಶ್ನೆ ಮಾಡಿದ ಸಚಿವರು, ತನಿಖೆ ನಡೆಯುತ್ತಿದೆ. ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದು ತಿಳಿಸಿದರು.
ಜಾತಿಗಣತಿ ವಿಚಾರ ಕುರಿತು ನಾಳೆ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆಯುತ್ತದೆ. ಅಲ್ಲಿ ತೀರ್ಮಾನ ಆಗುತ್ತದೆ ಎಂದರು.
ಇದನ್ನೂ ಓದಿ: 5 ವರ್ಷ ಸಿದ್ದರಾಮಯ್ಯನವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಇದನ್ನೂ ಓದಿ: ಜಾತಿ ಗಣತಿ ಕುರಿತ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿಕೆಶಿ