ETV Bharat / state

ಕುಡಿವ ನೀರು ನಿರ್ವಹಣೆ ಸಭೆ ನಡೆಸಲು ನೀತಿ ಸಂಹಿತೆ ವಿನಾಯಿತಿ ಕೋರಿದ ಪ್ರಿಯಾಂಕ್ ಖರ್ಗೆ - Minister Priyank Kharge

author img

By ETV Bharat Karnataka Team

Published : May 10, 2024, 3:37 PM IST

ಕುಡಿವ ನೀರು ನಿರ್ವಹಣೆ ಸಭೆ ನಡೆಸಲು ನೀತಿ ಸಂಹಿತೆ ವಿನಾಯಿತಿ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಚುನಾವಣಾಧಿಕಾರಿಗೆ ಮನವಿ ಮಾಡಿದ್ದಾರೆ.

Etv Bharat
ಪ್ರಿಯಾಂಕ್ ಖರ್ಗೆ (ETV Bharat)

ಬೆಂಗಳೂರು: ಬರ ಹಾಗೂ ಕುಡಿವ ನೀರಿನ‌ ನಿರ್ವಹಣೆ ಸಂಬಂಧ ಸಭೆ ನಡೆಸಲು ಮಾದರಿ ನೀತಿ ಸಂಹಿತೆಗೆ ವಿನಾಯಿತಿ ನೀಡುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಎಲ್ಲ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ಈ ಹಿನ್ನೆಲೆಯಲ್ಲಿ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಹಾಗೂ ಸಭೆಯ ನಿರ್ಧಾರಗಳಿಗೆ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅನುಮತಿ ಕೋರಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬವಾಗುವ ವರದಿ ನೀಡಲಾಗಿದೆ. ಹೀಗಾಗಿ, ಮುಂದಿನ ಎರಡು ತಿಂಗಳವರೆಗೆ ಜನರು ಹಾಗೂ ಜಾನುವಾರುಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರಿನ ನಿರ್ವಹಣೆ ಅತ್ಯವಶ್ಯಕವಾಗಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕಂದಾಯ ಸಚಿವರೂ ಬರ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿಗಳು, ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲು ಅನುವು ಮಾಡಿಕೊಡಲು ನೀತಿ ಸಂಹಿತೆ ಸಡಿಲಿಸುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದರು. ಆದರೆ, ಚುನಾವಣಾ ಆಯೋಗದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಇದೀಗ ಗ್ರಾಮೀಣಾಭಿವೃದ್ಧಿ ಸಚಿವರು ಸಭೆ ನಡೆಸಲು ನೀತಿ ಸಂಹಿತೆಗೆ ವಿನಾಯಿತಿ ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ: ದಾವಣಗೆರೆಯ ಕಂದನಕೋವಿಯಲ್ಲಿ ಕುಡಿವ ನೀರಿಗೆ ತತ್ವಾರ, ಯುವಕರಿಗೆ ಹೆಣ್ಣು ಕೊಡಲು ಹಿಂದೇಟು: ಆರೋಪ - drink water problem

ETV Bharat Logo

Copyright © 2024 Ushodaya Enterprises Pvt. Ltd., All Rights Reserved.