ರಾಮನಗರ: ಬಿಡದಿಯಲ್ಲಿ ನಡೆದಿದ್ದ ಬಾಲಕಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ, ಎಫ್ಎಸ್ಎಲ್ ವರದಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರೋದು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಅಂತಾ ಮೃತ ಬಾಲಕಿ ಕುಟುಂಬಸ್ಥರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಿಡದಿಯಲ್ಲಿ ಮಾತನಾಡಿದ ಅವರು, ಇದೀಗ ತಾನೇ ಬಾಲಕಿ ಹತ್ಯೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬಂದಿದ್ದು, ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿರೋದು ಕಂಡು ಬಂದಿಲ್ಲ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಜನರನ್ನು ವಿಚಾರಣೆ ಮಾಡಿದ್ದೇವೆ. ಅದರಲ್ಲಿ ಯಾರ ಪಾತ್ರವೂ ಕಂಡು ಬಂದಿಲ್ಲ ಎಂದರು.
ಎಫ್ ಎಸ್ ಎಲ್ ರಿಪೋರ್ಟ್ ನಲ್ಲಿ ಅತ್ಯಾಚಾರ ಆಗಿಲ್ಲ ಎನ್ನುವುದು ಗೊತ್ತಾಗಿದೆ. ಯಾವುದೇ ರೀತಿಯ ಅತ್ಯಾಚಾರ ಆಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಮೃತ ಬಾಲಕಿ ತಲೆಗೆ ಹಾಗೂ ಮೈ ಮೇಲೆ ಗಾಯಗಳಾಗಿವೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ಬರಬೇಕಾಗಿದೆ. ಪೋಸ್ಟ್ ಮಾರ್ಟಮ್ ನಲ್ಲಿ ಏನಾಗಿದೆ ಎಂಬುದು ಸ್ಪಷ್ಟವಾಗಿ ಗೊತ್ತಾಗಲಿದೆ. ಮೇಲ್ನೋಟಕ್ಕೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿರಬಹುದು ಅನ್ನೋದು ಗೊತ್ತಾಗ್ತಿದೆ. ಮರಣೋತ್ತರ ಪರೀಕ್ಷೆ ಬಂದ ಬಂತರ ಸ್ಪಷ್ಟ ಚಿತ್ರಣ ಬರಲಿದೆ ಎಂದು ಪ್ರಕರಣದ ಮಾಹಿತಿ ನೀಡಿದರು.
ಕೆಲವು ಸೋಷಿಯಲ್ ಮೀಡಿಯಾದಲ್ಲಿ ಈ ಪ್ರಕರಣಕ್ಕೆ ಸಂಬಂಧ ತಪ್ಪಾಗಿ ಬಂದಿದೆ. ಅತ್ಯಾಚಾರ ಎಸಗಿದ್ದಾರೆ, ಮೈಮೇಲೆ ಸಿಗರೇಟ್ ನಿಂದ ಸುಟ್ಟಗಾಯಗಳಾಗಿವೆ ಅಂತೆಲ್ಲ ಹೇಳಿದ್ದಾರೆ. ಆ ರೀತಿ ಯಾವುದೇ ಗಾಯಗಳು ಮೈಮೇಲೆ ಇಲ್ಲ. ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಸುಳ್ಳು ಸುದ್ದಿಗಳನ್ನು ಬಿಂಬಿಸಿದ್ದಾರೆ. ಈ ರೀತಿಯ ಸುಳ್ಳು ಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ತೋರಿಸಿದರೆ ಕಠಿಮ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇದೇ ವೇಳೆ ಎಸ್ಪಿ ಎಚ್ಚರಿಕೆ ಸಹ ನೀಡಿದರು.
ಈ ಪ್ರಕರಣವನ್ನು ರೈಲ್ವೆ ಪೊಲೀಸರು ತನಿಖೆ ಮಾಡಬೇಕಾಗಿತ್ತು. ಆದರೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಹೋಗುವ ಮುನ್ನವೇ ಅತ್ಯಾಚಾರ ಆಗಿದೆ ಅಂತಾ ಸುದ್ದಿ ಹರಡಿತ್ತು. ಹಾಗಾಗಿ ಪೊಲೀಸರ ಬಗ್ಗೆ ತಪ್ಪು ಸಂದೇಶ ಹೋಗಬಾರದು ಎಂದು ನಾವು ಈ ಪ್ರಕರಣದ ತನಿಖೆ ನಡೆಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ: ಕ್ರೀಡಾಂಗಣಕ್ಕೆ ನುಗ್ಗಿ ಕೊಹ್ಲಿ ಅಪ್ಪಿಕೊಳ್ಳುವುದಾಗಿ ಚಾಲೆಂಜ್ ಹಾಕಿದ್ದ ಯುವಕ ಪೊಲೀಸ್ ವಶಕ್ಕೆ