ಹಾವೇರಿ: ಮತ್ತೆ ಮುನ್ನೆಲೆಗೆ ಬಂದ ನೈತಿಕ ಪೊಲೀಸ್​ಗಿರಿ ಪ್ರಕರಣ; 9 ಜನರ ವಿರುದ್ಧ ಪ್ರಕರಣ

author img

By ETV Bharat Karnataka Desk

Published : Jan 20, 2024, 11:15 AM IST

Updated : Jan 20, 2024, 11:30 AM IST

ನೈತಿಕ ಪೊಲೀಸ್ ಗಿರಿ ಪ್ರಕರಣ

ಹಾವೇರಿಯಲ್ಲಿ ಸಹೋದ್ಯೋಗಿಯೊಂದಿಗೆ ಯುವತಿಯೊಬ್ಬಳು ಹೋಗುವಾಗ ಯುವಕರ ಗುಂಪೊಂದು ತಡೆದು ನೈತಿಕ ಪೊಲೀಸ್​ಗಿರಿ ನಡೆಸಿದೆ.

ಹಾವೇರಿ : ಹಾನಗಲ್ ನೈತಿಕ ಪೊಲೀಸ್​ಗಿರಿ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಶುಕ್ರವಾರ ವ್ಯಕ್ತಿಯೊಬ್ಬರ ಜೊತೆ ಯುವತಿ ಹೋಗುವಾಗ ಯುವಕರ ಗುಂಪೊಂದು ತಡೆದು ಹಲ್ಲೆ ನಡೆಸಿದೆ. ಈ ಬಗ್ಗೆ ಯುವತಿ ನೀಡಿರುವ ದೂರಿ ಮೇರೆಗೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹೋದ್ಯೋಗಿಯೊಂದಿಗೆ ಕೆಲಸ ಮುಗಿಸಿ ಯುವತಿ ಮನೆಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಯುವಕರ ಗುಂಪು ತಡೆದು ನೈತಿಕ ಪೊಲೀಸ್​ಗಿರಿ ನಡೆಸಿದೆ. ಸಾರ್ವಜನಿಕ ಸ್ಥಳದಲ್ಲಿ ಎಳೆದಾಡಿ ಕಪಾಳ ಮೋಕ್ಷ ಮಾಡಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಯುವತಿ ಪ್ರಕರಣ ದಾಖಲಿಸಿದ್ದಾರೆ.

ಈಗಾಗಲೇ ಬ್ಯಾಡಗಿ ಪೊಲೀಸರು 9 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 7 ಜನ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿವೈಎಸ್ಪಿ ಪಾಟೀಲ್​ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರ ಬಂಧನ

Last Updated :Jan 20, 2024, 11:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.