ETV Bharat / state

ಹುಬ್ಬಳ್ಳಿ: ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

author img

By ETV Bharat Karnataka Team

Published : Mar 16, 2024, 12:30 PM IST

ಹಣಕಾಸಿನ ವಿಚಾರವಾಗಿ ಇಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ
ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಹುಬ್ಬಳ್ಳಿ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರೂರು ಗ್ರಾಮದ ಜಗದೀಶ ಡಾಬಾದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ವರೂರು ಗ್ರಾಮದ ಸುಧೀರ ಹುಲಗಣ್ಣವರ್ (31) ಕೊಲೆಯಾದ ಯುವಕನಾಗಿದ್ದಾನೆ.

ಗ್ರಾಮದ ಸಾಗರ ಮಹಾದೇವಪ್ಪ ಗಬ್ಬನ್ನವರ ಹಾಗೂ ಸುಧೀರ್​ ಮಧ್ಯೆ ಡಾಬಾದಲ್ಲಿ ಊಟ ಮಾಡುವ ವೇಳೆ ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ಮೇಲೆ ಸಾಗರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಸುಧೀರ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಅಲ್ಲಿಂದ ಸಾಗರ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.