ಬೆಂಗಳೂರು: ಕರ್ತವ್ಯ ಲೋಪದ ಆರೋಪದಡಿ ಅಮಾನತಾಗಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಅವರ ಸ್ಥಾನಕ್ಕೆ ಸಿ. ವಂಶಿಕೃಷ್ಣ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಕಾಶ್ ಕುಮಾರ್ ವಿಕಾಶ್ ಅವರಿಂದ ತೆರವಾದ ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಗೆ ಸಿ.ವಂಶಿಕೃಷ್ಣ ಅವರು ನೇಮಕಗೊಂಡಿದ್ದಾರೆ.
ಜೂನ್ 4ರಂದು ಆರ್‌ಸಿಬಿ ತಂಡದ ಆಟಗಾರರ ಸಂಭ್ರಮಾಚರಣೆ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳು ಹಾಗೂ ಕಬ್ಬನ್ ಪಾರ್ಕ್ ಠಾಣಾ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿತ್ತು.
ಇದನ್ನೂ ಓದಿ: ಅಮಾನತು ಆದೇಶ ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್