ETV Bharat / state

ಕೋವಿಡ್ ಪರೀಕ್ಷೆ ಹೆಸರಲ್ಲಿ ದುಬಾರಿ ಶುಲ್ಕದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ - CM SIDDARAMAIAH

ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

no-need-to-worry-about-covid-but-follow-precautionary-measures-cm-siddaramaiah-advises
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : June 12, 2025 at 11:09 AM IST

1 Min Read

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ. ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11 ಸಾವುಗಳು ಸಂಭವಿಸಿವೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

no-need-to-worry-about-covid-but-follow-precautionary-measures-cm-siddaramaiah-advises
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ (ETV Bharat)

ಈ ವೇಳೆ, ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಸಭೆಯಲ್ಲಿ ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಸೂರು ಚಿತ್ರನಗರಿ ನಿರ್ಮಾಣಕ್ಕೆ ಸ್ವಲ್ಪ ಸಮಸ್ಯೆ ಇದೆ: ಸಚಿವ ಡಾ. ಹೆಚ್​​.ಸಿ. ಮಹದೇವಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.