ETV Bharat / state

ಬಜೆಟ್ ಅಧಿವೇಶನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ವಿಪಕ್ಷ ನಾಯಕ ಆರ್.ಅಶೋಕ್

author img

By ETV Bharat Karnataka Team

Published : Feb 12, 2024, 5:56 PM IST

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಂಜೆ 7ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಯಲಿದೆ.

r ashok
ಆರ್‌. ಅಶೋಕ್

ಬೆಂಗಳೂರು: ರಾಜ್ಯ ವಿಧಾನಸಭಾ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸರ್ಕಾರದ ವೈಫಲ್ಯಗಳ ವಿರುದ್ಧ ಸಾಂಘಿಕ ಹೋರಾಟ ನಡೆಸಲು ಪಕ್ಷದ ಸದಸ್ಯರಿಗೆ ಅಗತ್ಯ ಸಲಹೆ ಸೂಚನೆ ನೀಡುವುದು ಮತ್ತು ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಈ ಸಭೆಯ ಉದ್ದೇಶ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸಂಜೆ 7ಗಂಟೆಗೆ ನಗರದ ಖಾಸಗಿ ತಾರಾ ಹೋಟೆಲ್‌ನಲ್ಲಿ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಸರ್ಕಾರದ ವಿರುದ್ಧ ಸದನದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಕುರಿತು ಚರ್ಚಿಸಲಾಗುತ್ತದೆ. ಸರ್ಕಾರದ ವಿರುದ್ಧ ಸದನದೊಳಗಡೆ ನಡೆಸಬೇಕಾದ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆಯಾಗಲಿದೆ. ಕೇಂದ್ರದ ಅನುದಾನದ ತಾರತಮ್ಯ ವಿಚಾರದಲ್ಲಿ ಸರ್ಕಾರ ಕಟ್ಟಿ ಹಾಕಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದ್ದು, ಶಾಸಕರಿಗೆ ಸದನದಲ್ಲಿ ಮಾತನಾಡಲು ಸಿದ್ಧತೆ ಬಗ್ಗೆ ಸಭೆಯಲ್ಲಿ ಸೂಚನೆ ನೀಡಲುವ ಸಾಧ್ಯತೆ ಇದೆ. ಮೇಲ್ಮನೆ ಹಾಗೂ ಕೆಳಮನೆ ಎರಡೂ ಕಡೆಯ ಶಾಸಕರು ಸಭೆಗೆ ಬರಲು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ, ಕೇಂದ್ರದ ಅನುದಾನ ತಾರತಮ್ಯದ ಆರೋಪಕ್ಕೆ ತಕ್ಕ ಉತ್ತರವನ್ನು ನೀಡಬೇಕು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು, ಬರ ಪರಿಹಾರದ ವಿಚಾರದಲ್ಲಿ ಸರ್ಕಾರದ ವಿರುದ್ಧ ಸದನದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಬೇಕು, ಅಭಿವೃದ್ಧಿ ಕಾರ್ಯ ನಡೆಯದಿರುವುದು ಹಾಗೂ ಆಡಳಿತ ವೈಫಲ್ಯದ ವಿಚಾರದಲ್ಲಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಬೇಕು, ಪ್ರತಿ ವಿಷಯದಲ್ಲಿಯೂ ಪಕ್ಷದಿಂದ ಸ್ಪಷ್ಟತೆಯೊಂದಿಗೆ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಇನ್ನು ಶಾಸಕಾಂಗ ಪಕ್ಷದ ಸಭೆಗೆ ಅಸಮಾಧಾನಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸರ್ಕಾರ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ: ಅಶೋಕ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.