ETV Bharat / state

ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಪತ್ತೆಗಾಗಿ 300ಕ್ಕೂ ಅಧಿಕ ಸಿಸಿಟಿವಿ ದೃಶ್ಯಗಳ ವಿಶ್ಲೇಷಣೆ - CCTV FOOTAGE ANALYZE

ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿಯ ಪತ್ತೆಗಾಗಿ 300ಕ್ಕೂ ಅಧಿಕ ಸಿಸಿಟಿವಿ ದೃಶ್ಯಗಳನ್ನ ವಿಶ್ಲೇಷಣೆ ಮಾಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

BENGALURU
ಘಟನಾ ಸ್ಥಳ (ETV Bharat)
author img

By ETV Bharat Karnataka Team

Published : April 8, 2025 at 2:24 PM IST

1 Min Read

ಬೆಂಗಳೂರು : ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಆರೋಪಿಯ ಪತ್ತೆಗಾಗಿ 300ಕ್ಕೂ ಅಧಿಕ ಸಿಸಿಟಿವಿಗಳ ದೃಶ್ಯಾವಳಿಗಳನ್ನ ವಿಶ್ಲೇಷಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡ ಪರಿಣಾಮ ಆರೋಪಿ ಸ್ಥಳದಿಂದ ಕಾಲ್ಕಿತ್ತಿದ್ದ.

ಆರೋಪಿಯ ವಿಕೃತಿ ಘಟನೆ ಸ್ಥಳದ ಪಕ್ಕದಲ್ಲಿದ್ದ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಿರುಕುಳ ಅನುಭವಿಸಿದ ಯುವತಿಯರು ಘಟನೆ ಸಂಬಂಧ ಯಾವುದೇ ದೂರು ನೀಡಿರಲಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನನ್ವಯ ಸದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ : ಬೆಂಗಳೂರು: ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ - SEXUALLY HARASSED

ETV Bharat Logo

Copyright © 2025 Ushodaya Enterprises Pvt. Ltd., All Rights Reserved.