ETV Bharat / state

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹೈಕೋರ್ಟ್​ಗೆ ಪಿಐಎಲ್​ - HIGH COURT

ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ ಅಸಾಂವಿಧಾನಿಕ ಎಂದು ಘೋಷಿಸಲು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

HIGH COURT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : June 11, 2025 at 12:42 PM IST

2 Min Read

ಬೆಂಗಳೂರು : 'ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025' ಅನ್ನು ಸಂವಿಧಾನ ಬಾಹಿರ ಎಂದು ಘೋಷಿಸುವಂತೆ ಕೋರಿ ಸಿನಿಮಾ ನಿರ್ದೇಶಕ ಟಿ.ಎಸ್. ನಾಗಾಭರಣ ಮತ್ತಿತರರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯು ಸಂವಿಧಾನದ 74ನೇ ತಿದ್ದುಪಡಿ ಮಾಡಿ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಈ ಕಾಯ್ದೆ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆ ಆಗಲು ಸಾಧ್ಯವಿಲ್ಲ. ಚುನಾಯಿತ ಕೌನ್ಸಿಲರ್​ಗಳ ಅಧಿಕಾರ ಮತ್ತು ಹಕ್ಕುಗಳನ್ನು ಪ್ರಾಧಿಕಾರ ಕಡೆಗಣಿಸುತ್ತದೆ. ಚುನಾಯಿತರಲ್ಲದ ವ್ಯಕ್ತಿಗಳಿಗೆ ಹೆಚ್ಚಿನ ಅಧಿಕಾರ ಸಿಗಲಿದೆ. ಇದು ಅಧಿಕಾರ ವಿಕೇಂದ್ರೀಕರಣ ಮತ್ತು ಸ್ಥಳೀಯ ಸರ್ಕಾರಗಳ ಬಲವರ್ಧನೆಯ ತತ್ವಕ್ಕೆ ಪೆಟ್ಟುಕೊಡಲಿದೆ. ಬೆಂಗಳೂರಿನ ಆಡಳಿತ ಮತ್ತು ನಿರ್ವಹಣೆಯನ್ನು ನೇರವಾಗಿ ಸರ್ಕಾರದ ಹತೋಟಿಗೆ ತೆಗೆದುಕೊಳ್ಳುವ ಹುನ್ನಾರದಿಂದ ಈ ಪ್ರಾಧಿಕಾರ ರಚನೆ ಮಾಡಲಾಗಿದೆ. ಪ್ರಾಧಿಕಾರ ರಚನೆಯಿಂದ ಚುನಾವಣೆ ಸಹ ವಿಳಂಬವಾಗಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025 ಅನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಏನಿದು ಗ್ರೇಟರ್​ ಬೆಂಗಳೂರು ಕಾಯ್ದೆ: ರಾಜಧಾನಿಯಲ್ಲಿ ಉತ್ತಮ ಆಡಳಿತ ಹಾಗೂ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರದ ವಿವಿಧ ಸಂಸ್ಥೆಗಳ ಮಧ್ಯೆ ಸಮನ್ವಯಕ್ಕಾಗಿ ರೂಪಿಸಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ, ಗರಿಷ್ಠ 7 ನಗರ ಪಾಲಿಕೆಗಳನ್ನು ರಚಿಸುವ ಕುರಿತು 'ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ' ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಮಾರ್ಚ್​ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವು ಅಂಗೀಕಾರಗೊಂಡು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ, ಕೆಲ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಅನುಮೋದಿಸಬಾರದು ಎಂದು ಮನವಿ ಮಾಡಿದ್ದವು. ಇದನ್ನು ಆಧರಿಸಿ ರಾಜ್ಯಪಾಲರು ಕಾಯ್ದೆಯಲ್ಲಿ ಕೆಲ ಅಂಶಗಳ ಬಗ್ಗೆ ಸ್ಪಷ್ಟನೆ ಕೋರಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಆ ಬಳಿಕ ಸರ್ಕಾರ ಮತ್ತೆ ವಿಧೇಯಕವು ಸರಿಯಾಗಿದೆ ಎಂಬ ಒಕ್ಕಣೆಯೊಂದಿಗೆ ರಾಜಭವನಕ್ಕೆ ಕಳುಹಿಸಿಕೊಟ್ಟಿತ್ತು. ಆಗ ರಾಜ್ಯಪಾಲರು ಅನುಮೋದನೆ ನೀಡಿರುವುದರಿಂದ ಸರ್ಕಾರ ರಾಜ್ಯಪತ್ರ ಹೊರಡಿಸಿದ್ದು, ಗ್ರೇಟರ್ ಬೆಂಗಳೂರು ರಚನೆಗೆ ಇದ್ದ ಎಲ್ಲ ಕಾನೂನು ಸಮಸ್ಯೆ ನಿವಾರಣೆ ಆಗಿತ್ತು.

ಹಾಲಿ ಇರುವ ಮಹಾನಗರ ಪಾಲಿಕೆಯನ್ನು ವಿಭಜಿಸಿ ಗರಿಷ್ಠ 7 ಹೊಸ ಪಾಲಿಕೆ ರಚಿಸುವ ಪ್ರಧಾನ ಅಂಶ ಕಾಯ್ದೆಯಲ್ಲಿದೆ. ಇದರ ಅನ್ವಯ ಹೊಸದಾಗಿ 3 ಅಥವಾ 5 ಪಾಲಿಕೆ ರಚಿಸುವ ಬಗ್ಗೆ ಸರ್ಕಾರ ಒಲವು ಹೊಂದಿದೆ. ಇದಕ್ಕಾಗಿ ತಜ್ಞರು ಹಾಗೂ ನಿವೃತ್ತ ಅಧಿಕಾರಿಗಳ ನೇತೃತ್ವದ ಸಮಿತಿಯನ್ನು ರಚಿಸಿ, ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಸಮನ್ವಯ ಮತ್ತು ಮೇಲ್ವಿಚಾರಣೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆ, ಗರಿಷ್ಠ 7 ನಗರ ಪಾಲಿಕೆಯಾಗಿ ವಿಭಜಿಸುವ ಅವಕಾಶವಿದೆ. ವಾರ್ಡ್‌ ಸಮಿತಿಗಳನ್ನು ನಗರಾಡಳಿತದ ಮೂಲ ಘಟಕಗಳನ್ನಾಗಿಸುವುದೂ ಸೇರಿದಂತೆ ಹಲವು ವಿಷಯಗಳು ಈ ವಿಧೇಯಕದಲ್ಲಿ ಪ್ರಸ್ತಾಪವಾಗಿವೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿ ಎಷ್ಟು? ಬೆಂಗಳೂರು ಗ್ರಾಮಾಂತರದ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಮತ್ತು ಆನೇಕಲ್, ರಾಮನಗರ ಜಿಲ್ಲೆಯ ಬಿಡದಿ, ಕನಕಪುರ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಲಿವೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ : ರಾಜಧಾನಿಯಲ್ಲಾಗುವ ಬದಲಾವಣೆಗಳೇನು? - GREATER BENGALURU BILL

ETV Bharat Logo

Copyright © 2025 Ushodaya Enterprises Pvt. Ltd., All Rights Reserved.