ETV Bharat / state

'ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ನೀರಿನ ಬಾಟಲ್‌ ಸೇರಿ ಎಲ್ಲ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧ' - PLASTIC BAN IN TEMPLES

ರಾಜ್ಯದ 31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು, ಉಳಿದ ಕಡೆ ಶೀಘ್ರವೇ ಮಾಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ (ETV Bharat)
author img

By ETV Bharat Karnataka Team

Published : June 9, 2025 at 7:00 PM IST

2 Min Read

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿರುವ ದೇವಸ್ಥಾನಗಳಲ್ಲಿ ನೀರಿನ ಬಾಟಲ್, ಪ್ಲಾಸ್ಟಿಕ್ ಬಳಸದಂತೆ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆ ನಿರ್ಧರಿಸಿದೆ.

ವಿಕಾಸಸೌಧದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ, ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು, ಆಗಸ್ಟ್ 15 ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ರಾಮಲಿಂಗಾರೆಡ್ಡಿ (ETV Bharat)

ಈ ಆದೇಶ ಜಾರಿಗೆ ಎರಡು ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ, ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದರು.

ಅರ್ಚಕರಿಗೆ ತಸ್ತೀಕ್ ನೇರ ವರ್ಗಾವಣೆ (ಡಿಬಿಟಿ) ಮೂಲಕ ನೀಡುತ್ತೇವೆ. ಈಗ 25,536 ಅರ್ಜಿಗಳ ಪೈಕಿ 14,433 ಸಾವಿರ ಅರ್ಜಿಗಳು ಬಂದಿವೆ. ಉಳಿದವರು ಬೇಗ ಮಾಹಿತಿ ನೀಡಿದರೆ ಅವರಿಗೂ ಡಿಬಿಟಿ ಮೂಲಕ ತಸ್ತೀಕ್ ಹಣ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಆಸ್ತಿ ಇಂಡೀಕರಣ: 15,000 ಎಕರೆ ದೇವಸ್ಥಾನಗಳ ಆಸ್ತಿ ಇಂಡೀಕರಣ ಆಗಿದೆ. ಇನ್ನೂ 20,000 ಎಕರೆ ದೇವಸ್ತಾನಗಳ ಖಾತೆ ಮಾಡಬೇಕಾಗಿದೆ. ಸೆಕ್ಷನ್ 31/7ರಂತೆ ಮೂರು ತಿಂಗಳ ಒಳಗೆ ಟೆಂಪಲ್ ಆಸ್ತಿಯ ಬಗ್ಗೆ ಅಧಿಸೂಚನೆ ಹೊರಡಿಸಲು ಸೂಚಿಸಲಾಗಿದೆ. 3,470 ದಾಖಲೆ ಸೃಷ್ಟಿ ಮಾಡಲಾಗಿದೆ. 40,000 ಆಸ್ತಿಗಳ ಬಗ್ಗೆ ಅಧಿಸೂಚನೆ ಹೊರಡಿಸುತ್ತೇವೆ. ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನು ಪ್ರತ್ಯೇಕ ಸರ್ವೇ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೇ ಮಾಡಿ ನೋಟಿಫಿಕೇಶನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

8 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್​: ರಾಜ್ಯದ 31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು, ಉಳಿದ ಕಡೆ ಶೀಘ್ರವೇ ಮಾಡಬೇಕು. ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಜಾಪುರ, ಪಂಡರಾಪುರ ಸೇರಿ ಹಲವು ಕಡೆ ಭವನಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಹೊಸ ಪ್ರಾಧಿಕಾರಗಳ ಸಮಗ್ರ ಯೋಜನೆಗೆ ಕ್ರಮವಹಿಸಲಾಗಿದೆ. ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲ್ಯಾನ್ ಮಾಡಲು ನಿರ್ಧರಿಸಲಾಗಿದೆ. ಚಾಮುಂಡೇಶ್ವರಿ ಬೆಟ್ಟದಲ್ಲಿ ಒತ್ತುವರಿ ಆಗಿದ್ದ 11 ಎಕರೆ ಜಾಗವನ್ನು ತೆರವು ಮಾಡಲಾಗಿದೆ. ಉಳಿದ ಜಾಗ ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: ಹೊಯ್ಸಳ ಶೈಲಿಯಲ್ಲಿ ಧಾರ್ಮಿಕ ಸೌಧ ನಿರ್ಮಾಣದ ನೀಲನಕ್ಷೆ ಸಿದ್ಧ

ಇದನ್ನೂ ಓದಿ: ಮುಜರಾಯಿ ದೇವಾಲಯಗಳ ಹೆಸರಿಗೆ ಖಾತೆ: 15,413.17 ಎಕರೆ ಜಮೀನು ಖಾತೆ ಇಂಡೀಕರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.