ETV Bharat / state

ಸೋನಿಯಾ, ರಾಹುಲ್ ವಿರುದ್ಧ ಮೋದಿ, ಅಮಿತ್ ಶಾ ದ್ವೇಷದ ರಾಜಕಾರಣ: ಸಿಎಂ ಸಿದ್ದರಾಮಯ್ಯ ಟೀಕೆ - CM SIDDARAMAIAH

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

pm-modi-and-amit-shah-hatred-politics-against-sonia-gandhi-and-rahul-cm-siddaramaiah-criticizes
ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : April 16, 2025 at 1:51 PM IST

2 Min Read

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣ ಮುಂದುವರಿದ ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ''ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವ ಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ'' ಎಂದು ತಿಳಿಸಿದ್ದಾರೆ.

ದ್ವೇಷ ಸಾಧಿಸಲು ಇಡಿ ಆಯುಧ: ''ಸ್ವಾಯತ್ತ ತನಿಖಾ ಸಂಸ್ಥೆಯಾದ ಇ.ಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ'' ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಐಡಿ ಹೆಗಲಿಗೆ ಹುಬ್ಬಳ್ಳಿ ಎನ್‌ಕೌಂಟರ್ ತನಿಖೆ ಹೊಣೆ: ತನಿಖಾ ವರದಿ ಏನು ಬರುತ್ತದೆ ನೋಡೋಣ ಎಂದ ಪರಮೇಶ್ವರ್

''ವಿಚಾರಣೆ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ EDಯು ಅದರಿಂದ ಯಾವುದೇ ಫಲ ಸಿಗದೇ ಇದ್ದಾಗ, ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ'' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್​ ಗಾಂಧಿ ವಿರುದ್ಧ ಇಡಿ ಚಾರ್ಜ್​ಶೀಟ್​ ಸಲ್ಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.