ETV Bharat / state

ಮಾರಕಾಸ್ತ್ರ ಹಿಡಿದು ರೀಲ್ಸ್ ಪ್ರಕರಣ: ಮತ್ತೆ ರಜತ್ ವಶಕ್ಕೆ ಪಡೆದ ಪೊಲೀಸರು - POLICE DETAINED RAJAT KISHAN

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರಾಗದ ರಜತ್ ಕಿಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

police-detained-rajat-kishan-in-reels-case-with-weapon
ಪೊಲೀಸ್​ ವಶದಲ್ಲಿರುವ ರಜತ್ ಕಿಶನ್ (ETV Bharat)
author img

By ETV Bharat Karnataka Team

Published : April 16, 2025 at 1:17 PM IST

1 Min Read

ಬೆಂಗಳೂರು: ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರಜತ್ ಕಿಶನ್​​ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ (ಇಂದು) ಬಸವೇಶ್ವರ ನಗರ ಠಾಣೆಗೆ ಹಾಜರಾದ ರಜತ್ ಕಿಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಪೊಲೀಸರ ವಶದಲ್ಲಿರುವ ರಜತ್ ಕಿಶನ್ (ETV Bharat)

ಪ್ರಕರಣದಲ್ಲಿ ಜಾಮೀನು ಪಡೆದಿರುವ ರಜತ್ ಕಿಶನ್​​ಗೆ, ವಿಚಾರಣೆ ಸಂದರ್ಭದಲ್ಲಿ ಹಾಜರಿರುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು. ಆದರೆ, ಅವರು ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಜತ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ವಶಕ್ಕೆ ಪಡೆದು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್​ನಲ್ಲಿ ಅನಾಥವಾದ ಬಾಲಕಿ ಕೊಲೆ ಆರೋಪಿ ಶವ: ಫೋಟೋ ಬಿಡುಗಡೆ ಮಾಡಿದ ಪೊಲೀಸರು

ನ್ಯಾಯಾಲಯದ ಆದೇಶದ ಮೇರೆಗೆ ರಜತ್ ಕಿಶನ್​ ಅವರನ್ನು ವಶಕ್ಕೆ ಪಡೆದಿರುವ ಬಸವೇಶ್ವರನಗರ ಠಾಣೆ ಪೊಲೀಸರು, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಡಿಗೆಗೆ ಬೈಕ್ ಪಡೆದು ಮಹಿಳೆಯರ ಸರ ಎಗರಿಸುತ್ತಿದ್ದ ಇಬ್ಬರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.