ಬೆಂಗಳೂರು: ರೀಲ್ಸ್ ಹುಚ್ಚಿಗಾಗಿ ನಡು ರಸ್ತೆಯಲ್ಲಿ ವಿಡಿಯೋ ಮಾಡುತ್ತಿದ್ದ ಯುವಕನನ್ನು ನಗರದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಶಾಂತ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ವೃತ್ತಿಯಲ್ಲಿ ಡ್ರೈವರ್ ಆಗಿದ್ದು, ರೀಲ್ಸ್ ವ್ಯಾಮೋಹ ಬೆಳೆಸಿಕೊಂಡಿದ್ದ. ಹೀಗಾಗಿ, ಎಸ್.ಜೆ.ಪಾರ್ಕ್ನ ಮುಖ್ಯರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತು ಟೀ ಕುಡಿಯುತ್ತ ರೀಲ್ಸ್ ಮಾಡಿದ್ದ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಂತೆ, ಕೆ.ಆರ್.ಮಾರ್ಕೆಟ್ ಠಾಣೆ ಸೋಷಿಯಲ್ ಮೀಡಿಯಾ ವಿಂಗ್ ಎಸ್.ಜೆ.ಠಾಣೆ ಪೊಲೀಸರಿಗೆ ಮಾಹಿತಿ ನೀಡಿತ್ತು.
Taking tea time to the traffic line will brew you a hefty fine, not fame !!! BEWARE BCP is watching you#police #awareness #weserveandprotect #stayvigilant pic.twitter.com/5A8aCJuuNc
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) April 17, 2025
ಇದರ ಆಧಾರದ ಮೇರೆಗೆ ಆರೋಪಿತನ ವಿರುದ್ಧ ಎನ್ಸಿಆರ್ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆಯಲಾಗಿದೆ. ಏಪ್ರಿಲ್ 12ರಂದು ರೀಲ್ಸ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬ್ಯಾಡಗಿಯಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಸುದ್ದಿ ಸುಳ್ಳು: ಎಸ್ಪಿ ಸ್ಪಷ್ಟನೆ