ಶಿವಮೊಗ್ಗ: ನಗರ ಉಪವಿಭಾಗ-2ರ ಮಂಡ್ಲಿ ವಿ. ವ್ಯಾಪ್ತಿಯಲ್ಲಿ 11 ಕೆವಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಈ ವ್ಯಾಪ್ತಿಯ ವಿವಿಧೆಡೆ ಆಗಸ್ಟ್ 14ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೊನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.
ಇದನ್ನೂ ಓದಿ: ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - Karnataka Rain forecast