ETV Bharat / state

ವಿಧಾನಸೌಧದಲ್ಲಿ ದೇಶದ್ರೋಹ ಘೋಷಣೆ ಖಂಡನೀಯ: ಜಗದೀಶ್ ಶೆಟ್ಟರ್

author img

By ETV Bharat Karnataka Team

Published : Feb 28, 2024, 10:36 PM IST

Former CM Jagdish Shettar spoke at the press conference.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೂ, ದೇಶದ್ರೋಹದ ಹೇಳಿಕೆ ಕೇಳಿಯೇ ಇಲ್ಲವೆಂದು ವರ್ತಿಸುತ್ತಿರುವ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಖಂಡಿಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿ ಕೇಂದ್ರ. ರಾಜ್ಯಸಭಾ ಸದಸ್ಯರು ಇರುವ ವೇಳೆಯೇ ದೇಶದ್ರೋಹದ ಕೆಲಸವಾಗಿರುವುದನ್ನು ಖಂಡಿಸುವುದಾಗಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

‌ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್‌ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಇದು ಖಂಡನೀಯ‌. ಈ ಬಗ್ಗೆ ಸ್ಪಷ್ಟೀಕರಣ ಕೇಳಿದರೂ ಪಾಕಿಸ್ತಾನ ಪರವಾದ ಘೋಷಣೆ ಕೇಳಿಯೇ ಇಲ್ಲ ಎಂದು ಕಾಂಗ್ರೆಸ್​ ಹೇಳುತ್ತಿದೆ. ಮಾಧ್ಯಮದವರ ಮೇಲೆ ಕಿಡಿಕಾರುವ ಮನಸ್ಥಿತಿ ಬದಲಾಗಬೇಕು ಎಂದರು‌.

ಪಾಕಿಸ್ತಾನದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಅಲ್ಲಿನ ಜನರೇ ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕರು ಆಗಬೇಕೆಂದು ಹೇಳುತ್ತಿದ್ದಾರೆ. ವಿಧಾನಸೌಧದಲ್ಲಿ ನಡೆದ ಘಟನೆಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಖಂಡಿಸಬೇಕು. ಘೋಷಣೆಯ ವಿಡಿಯೋ ರೆಕಾರ್ಡ್ ಆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಇಲ್ಲವಾದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ಹರಿಹಾಯ್ದರು.

ಅಲ್ಪಸಂಖ್ಯಾತರ ತುಷ್ಟೀಕರಣ ಕಡಿಮೆ ಆಗಬೇಕು‌: ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಕಡಿಮೆ ಆಗಬೇಕು‌. ಮತಬ್ಯಾಂಕ್​​ಗಾಗಿ ಘೋಷಣೆ ಕೂಗಿಯೇ ಇಲ್ಲ ಎನ್ನುವುದು ಎಷ್ಟರಮಟ್ಟಿಗೆ ಸರಿ? ಅವರ ಮಾತುಗಳನ್ನು ಓಲೈಕೆಗೆ ಈ ರೀತಿಯಲ್ಲಿ ಹೇಳುವುದು ಸರಿಯಲ್ಲ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದರು.

ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷ ದ್ರೋಹ ಕೆಲಸ ಮಾಡಿದ ಸೋಮಶೇಖರ್, ಹೆಬ್ಬಾರ್ ಮನಸ್ಥಿತಿ ಬದಲಾಗಬೇಕು. ಅವರು ರಾಜೀನಾಮೆ ಕೊಡಬೇಕು. ಅಡ್ಡಮತದಾನ ಮಾಡಿದ್ದಕ್ಕೆ ಕಾನೂನು ರೀತಿಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ನಾನು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಂದಿಗೂ ದೂರವಾಗಿಲ್ಲ. ಇನ್ನು ಮುಂದೆ ಎಲ್ಲ ಕಾರ್ಯಕ್ರಮದಲ್ಲೂ ಭಾಗಿಯಾಗುತ್ತೇನೆ ಎಂದು ಶೆಟ್ಟರ್ ಹೇಳಿದರು.

ಇದನ್ನೂಓದಿ: ಕೀಳು ಮಟ್ಟದ ಟಾರ್ಗೆಟ್ ರಾಜಕಾರಣ: ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.