ETV Bharat / state

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

author img

By ETV Bharat Karnataka Team

Published : Feb 3, 2024, 2:01 PM IST

Updated : Feb 3, 2024, 2:20 PM IST

ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ಇಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

PS Dinesh Kumar sworn as Karnataka High Court Judge
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್ ಸಿಜೆ ಆಗಿ ಪಿ.ಎಸ್.ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಗೌರವಾನ್ವಿತ ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

PS Dinesh Kumar sworn as Karnataka High Court Judge
ಪಿ.ಎಸ್.ದಿನೇಶ್ ಕುಮಾರ್ ಅವರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್, ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಯು.ಬಿ ವಂಕಟೇಶ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PS Dinesh Kumar sworn as Karnataka High Court Judge
ಮುಖ್ಯಮಂತ್ರಿ, ರಾಜ್ಯಪಾಲರೊಂದಿಗೆ ನ್ಯಾಯಮೂರ್ತಿಗಳು

ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ರಾಜ್ಯ ಉಚ್ಛ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ, ಕೇಂದ್ರ ಸರ್ಕಾರ ಅವರನ್ನು ಮುಖ್ಯ ನ್ಯಾಯಮೂರ್ತಿಗಳನ್ನಾಗಿ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 24 ರಂದು ಪಿ ಎಸ್ ದಿನೇಶ್ ಕುಮಾರ್ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಕೆಲ ದಿನಗಳವರೆಗೆ ಮಾತ್ರ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: 'I am alive': ನಾನು ಜೀವಂತವಾಗಿದ್ದೇನೆಂದು ಹೇಳಿಕೊಂಡ ನಟಿ ಪೂನಂ ಪಾಂಡೆ

2015 ರಿಂದ ದಿನೇಶ್​ ಕುಮಾರ್​ ಅವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದೀಗ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚಿನ ವರ್ಷಗಳನ್ನು ಗಮನಿಸಿದರೆ, ಅತಿ ಕಡಿಮೆ ಅವಧಿಗೆ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿದ ಜಸ್ಟೀಸ್​​​ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರಾಗಿದ್ದಾರೆ. ಜೊತೆಗೆ, ಪ್ರಾಮಾಣಿಕತೆ ಮೂಲಕವೇ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕ

ಈ ಹಿಂದೆ ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ವರಾಳೆ ಅವರು ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಕೊಲಿಜಿಯಂ ದಿನೇಶ್​ ಕುಮಾರ್​ ಅವರನ್ನು ಹಂಗಾಮಿ ಸಿಜೆ ಆಗಿ ನೇಮಕ ಮಾಡಿತ್ತು. ಇದೀಗ ಕೊಲಿಜಿಯಂ ಶಿಫಾರಸಿನಂತೆ ಕರ್ನಾಟಕ ಹೈಕೋರ್ಟ್​​​​ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿತ್ತು.

Last Updated :Feb 3, 2024, 2:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.