ETV Bharat / state

ರಾಜ್ಯದಲ್ಲಿ ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ - KARNATAKA RAIN FORECAST

ರಾಜ್ಯದ ಹಲವೆಡೆ ಮುಂಗಾರು ಬಿರುಸುಗೊಂಡಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ರೆಡ್‌ ಆಲರ್ಟ್‌ ಘೋಷಿಸಿದೆ. ಇತರ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಇದೆ.

rain-red-alert-in-9-districts-of-karnataka-till-june-17
ಮಳೆ (ETV Bharat)
author img

By ETV Bharat Karnataka Team

Published : June 13, 2025 at 12:09 PM IST

2 Min Read

ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 17ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಜಿಲ್ಲೆಗಳಿಗೆ ರೆಡ್‌ ಆಲರ್ಟ್‌: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಇದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರ ಕರ್ನಾಟಕ, ಧಾರವಾಡ, ಉಡುಪಿ, ಗದಗ, ದಕ್ಷಿಣ ಕನ್ನಡ, ಹಾವೇರಿ, ರಾಯಚೂರು, ಶಿವಮೊಗ್ಗ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಮಂಡ್ಯ, ಬೆಂಗಳೂರು ನಗರ, ರಾಮನಗರ, ಹಾಸನ, ಬಳ್ಳಾರಿ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆ ಸುರಿದಿದೆ.

ಬೀದರ್‌, ಚಾಮರಾಜನಗರ, ಕೊಡಗು, ತುಮಕೂರು, ವಿಜಯಪುರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮುಂಗಾರು ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 100-250 ಮಿ.ಮೀ.ಗಳಷ್ಟು ಅತ್ಯಧಿಕ ಮಳೆ ವರದಿಯಾಗಿದೆ.

ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲೈ ಗಾಳಿಯಿಂದ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಬೆಂಗಳೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವರುಣಾರ್ಭಟ: ಮನೆ ಗೋಡೆ ಕುಸಿದು ವೃದ್ಧೆ ಸಾವು, ಕೊಚ್ಚಿ ಹೋಗುತ್ತಿದ್ದ ಆಟೋ ಚಾಲಕನ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.