ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೀಕ್ಷಿಸುವ ಭರದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಗಾಯಗೊಂಡಿರುವ ಕೆಲವರ ಚಿಕಿತ್ಸೆಯ ವೆಚ್ಚವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಭರಿಸತೊಡಗಿದೆ.
ಜೂನ್ 4ರಂದು ಚಿನ್ನಸ್ವಾಮಿ ಸ್ಟೇಡಿಯಂ ಅಥವಾ ಸ್ಟೇಡಿಯಂ ಸುತ್ತಮುತ್ತ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವವರು ಭರಿಸಿದ್ದ ವೆಚ್ಚವನ್ನು ಮರುಪಾವತಿ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಗಾಯಾಳುವೊಬ್ಬರ ಸಹೋದರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಅಭಿಮಾನಿಗಳಿಗಾಗಿ ತತಕ್ಷಣವೇ ಈ ಸೌಲಭ್ಯ ಒದಗಿಸಿದ RCB ಫ್ರ್ಯಾಂಚೈಸಿ
— 𝗚𝘂𝗿𝘂🇮🇳 (мσ∂ιʝι кα Y̺o̺d̺h̺a̺) (@Gururaj1972) June 7, 2025
ಚಿಕಿತ್ಸೆಗೆ ಖರ್ಚಾದ ಹಣವನ್ನು ಕೊಟ್ಟ RCB ಫ್ರ್ಯಾಂಚೈಸಿ pic.twitter.com/SvZ05jzqNi
ಕಾಲ್ತುಳಿತದಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನ ಸಹೋದರರೊಬ್ಬರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, "ನಮಗೆ ಮಣಿಪಾಲ್ ಆಸ್ಪತ್ರೆಯಿಂದ ಕರೆ ಮಾಡಿ ಹಣವನ್ನು ಮರುಪಾವತಿ ಮಾಡಿದ್ದಾರೆ. 2-3 ಆಸ್ಪತ್ರೆಗಳಲ್ಲಿ ಫ್ರಾಂಚೈಸಿ ವತಿಯಿಂದ ಮಾತನಾಡಿ ವ್ಯವಸ್ಥೆ ಕಲ್ಪಿಸಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳು ಚಿಕಿತ್ಸೆ ಪಡೆದಿರುವ ದಾಖಲೆಗಳನ್ನು ನೀಡಿದರೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮರುಪಾವತಿ ಮಾಡಲಾಗುತ್ತಿದೆ" ಎಂದಿದ್ದಾರೆ.
ಅವಘಡದಿಂದಾಗಿ ಮೃತಪಟ್ಟವರ ಜೀವಗಳಿಗೆ ಯಾರೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನ ದೇವರು ನೀಡಲಿ ಎಂದು ಪ್ರಾರ್ಥಿಸಬೇಕು ಎಂದು ವಿಡಿಯೋ ಮೂಲಕ ಅವರು ತಿಳಿಸಿದ್ದಾರೆ. ವಿಡಿಯೋವನ್ನು ಗುರು ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: 'ಇದೆಲ್ಲ ನೋಡಿಕೊಂಡು ಮೌನವಾಗಿರಲು ಸಾಧ್ಯವಿಲ್ಲ'; ಕಾಲ್ತುಳಿತ ಘಟನೆಗೆ ಬಿಸಿಸಿಐ ಸೀರಿಯಸ್