ETV Bharat / state

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ - CM VISITS CHAMUNDESHWARI TEMPLE

author img

By ETV Bharat Karnataka Team

Published : Aug 10, 2024, 2:58 PM IST

Updated : Aug 10, 2024, 6:57 PM IST

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ಧನಿದ್ದೇನೆ ಎಂದು ಬಿಜೆಪಿ-ಜೆಡಿಎಸ್​ ವಿರುದ್ಧ ಗುಡುಗಿದರು.

CHIEF MINISTER SIDDARAMAIAH  LEGAL FIGHT  BJP AND JDS  MYSURU
ಚಾಮುಂಡಿ ದೇವಿಯ ದರ್ಶನ ಪಡೆದ ಸಿಎಂ (ETV Bharat)

ಮೈಸೂರು : ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್​ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನ ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್​ನವರು ಆರೋಪಗಳನ್ನು ಆಧರಿಸಿ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನಿಗೆ ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

Chief Minister Siddaramaiah  legal fight  BJP and JDS  Mysuru
ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಿಎಂ (ETV Bharat)

ರಾಜಕೀಯವಾಗಿ ಮಣಿಸಲು ಬಿಜೆಪಿ-ಜೆಡಿಎಸ್ ಕುತಂತ್ರ: ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಆರೋಪಗಳಿಂದ ನನ್ನ ಮೇಲೆ ಕಪ್ಪು ಮಸಿ ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್​ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್​ ಡಿ ಕುಮಾರಸ್ವಾಮಿ, ಬಿ ಎಸ್​ ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ-ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್​ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ, ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಚಾಮುಂಡಿ ದೇವಿಯ ದರ್ಶನ ಪಡೆದ ಸಿಎಂ: ಇಂದು ಶ್ರಾವಣ ಶನಿವಾರದ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸಕ್ಕೂ ಮುನ್ನ ನಾಡ ಅಧಿದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದರು. ಬಳಿಕ ಚಾಮುಂಡಿ ಬೆಟ್ಟದಲ್ಲಿ ಕೆಲಸ ಮಾಡುವ ಕೆಲಸಗಾರರ ಜತೆ ಫೋಟೋಗೆ ಪೋಸ್‌ ನೀಡಿ ಬಳಿಕ ಚಾಮರಾಜನಗರಕ್ಕೆ ಹೊರಟರು.

ಓದಿ: ಮಕ್ಕಳ ತಟ್ಟೆಯಿಂದ ಮೊಟ್ಟೆ ಎತ್ತಿಕೊಂಡ ವಿಡಿಯೋ ವೈರಲ್: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್ - Worker assistant suspended

Last Updated : Aug 10, 2024, 6:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.