ಹುಬ್ಬಳ್ಳಿ(ಧಾರವಾಡ): "5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಇಡೀ ಸಮಾಜ ತಲೆ ತಗ್ಗಿಸುವ ವಿಚಾರ. ಮಗುವಿನ ಮುಖ ನೋಡಲು ಆಗುತ್ತಿಲ್ಲ" ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ ಮೃತ ಮಗುವನ್ನು ನೋಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ ಇಲ್ಲ. ಆರೋಪಿ ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಲಿದೆ. ಅಲ್ಲದೇ ಹುಬ್ಬಳ್ಳಿಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಸುರಕ್ಷಿತ ಕ್ರಮ ಕೈಗೊಳ್ಳಲಾಗುತ್ತದೆ" ಎಂಬ ಭರವಸೆ ನೀಡಿದರು.
"ಹುಬ್ಬಳ್ಳಿ, ಧಾರವಾಡದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಬಾಲಕಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ. ಜಮೀರ್ ಅಹ್ಮದ್ ಕೂಡ ವಸತಿ ಇಲಾಖೆಯಿಂದ ಮೃತ ಬಾಲಕಿ ಕುಟುಂಬಸ್ಥರಿಗೆ ಮನೆ ನೀಡುವ ಭರವಸೆ ನೀಡಿದ್ದಾರೆ. ಸರ್ಕಾರದ ಜೊತೆ ಮಾತನಾಡಿ ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ಮನವಿ ಮಾಡುತ್ತೇನೆ" ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದರು.
ಇದನ್ನೂ ಓದಿ: ಹುಬ್ಬಳ್ಳಿ ಬಾಲಕಿ ಕೊಲೆ ಕೇಸ್: ಈ ಘಟನೆಯಿಂದ ನೋವಾಗಿದೆ ಎಂದು ಭಾವುಕರಾದ ಸಚಿವ ಪ್ರಹ್ಲಾದ್ ಜೋಶಿ
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬಾಲಕಿಯ ಅಪಹರಿಸಿ ಕೊಲೆ: ಆರೋಪಿಯ ಎನ್ಕೌಂಟರ್ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ಹೀಗಿದೆ