ETV Bharat / state

ಪ್ರತ್ಯೇಕ ಅಪಘಾತ: ಮೂವರು ಸಾವು, ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಗಾಯ

author img

By ETV Bharat Karnataka Team

Published : Jan 27, 2024, 2:10 PM IST

ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿ ಆರು ಮಂದಿ ಗಾಯಗೊಂಡಿದ್ದಾರೆ.

parate accident  Three people died  ಪ್ರತ್ಯೇಕ ಅಪಘಾತ  ಆರು ಮಂದಿಗೆ ಗಾಯ  ರಸ್ತೆ ಅಪಘಾತ
ಪ್ರತ್ಯೇಕ ಅಪಘಾತ: ಮೂವರು ಸಾವು, ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಗಾಯ

ಚಾಮರಾಜನಗರ: ಬಸ್ ಹಾಗೂ ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗೇಟ್ ಬಳಿ ನಡೆದಿದೆ. ಹಂಗಳ ಗ್ರಾಮದ ವಾಹನ ಚಾಲಕ ಸಿದ್ದರಾಜು (34) ಮೃತಪಟ್ಟಿರುವ ಚಾಲಕ. ಇಬ್ಬರು ಮಕ್ಕಳು, ಮಹಿಳೆಯರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹಂಗಳ ಗ್ರಾಮದಿಂದ ಚಿಕ್ಕಲ್ಲೂರು ಜಾತ್ರೆಗೆ ಟಾಟಾ ಏಸ್​ನಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದ್ದು, ವಾಹನಗಳು ವೇಗದಲ್ಲಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ. ತೆರಕಣಾಂಬಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಬ್ಬರು ಬೈಕ್ ಸವಾರರು ಸಾವು: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಯಳಂದೂರು ತಾಲೂಕಿ‌ನ ಯರಿಯೂರು ಗ್ರಾಮದ ಕುಮಾರ್ (27) ಹಾಗೂ ರವಿ (27) ಮೃತರು.

ಇವರಿಬ್ಬರು ಚಿಕ್ಕಲ್ಲೂರು ಜಾತ್ರೆಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ‌ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕುಮಾರ್ ಹಾಗೂ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲಿಸಿದರು. ಮೃತ ದೇಹಗಳನ್ನು ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸದ್ಯ ಅಪಘಾತಕ್ಕೀಡಾದ ಎರಡು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಣರಾಜ್ಯೋತ್ಸವದ ನಡುವೆ ಮೈದಾನಕ್ಕೆ ನುಗ್ಗಿದ್ದ ವ್ಯಕ್ತಿ ಈ ಹಿಂದೆಯೂ ಅವಾಂತರ ಸೃಷ್ಟಿಸಿದ್ದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.