ETV Bharat / state

ದೇಶದ ಜಿಡಿಪಿ ಬೆಳವಣಿಗೆಯಲ್ಲಿ ರೇಷ್ಮೆ ಬೆಳೆ ಪ್ರಮುಖ ಪಾತ್ರ ವಹಿಸಿದೆ: ಹೆಚ್‌.ಡಿ.ಕುಮಾರಸ್ವಾಮಿ - H D Kumaraswamy

ದೇಶದ 27 ರಾಜ್ಯಗಳ ರೈತರು ರೇಷ್ಮೆ ಕೃಷಿಯಲ್ಲಿ ತೊಡಗಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಮೈಸೂರು ಭಾಗದಲ್ಲಿ ರೇಷ್ಮೆ ಬೆಳೆ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಹೇಳಿದರು.

author img

By ETV Bharat Karnataka Team

Published : Sep 20, 2024, 9:19 PM IST

ರೇಷ್ಮೆ ಪರಿಶೀಲಿಸುತ್ತಿರುವ ಕೇಂದ್ರ ಸಚಿವರು
ರೇಷ್ಮೆ ಪರಿಶೀಲಿಸುತ್ತಿರುವ ಕೇಂದ್ರ ಸಚಿವರು (Etv Bharat)

ಮೈಸೂರು: ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದೆ. ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿಂದು ಆಯೋಜಿಸಲಾಗಿದ್ದ "ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಂ ಜುಬಿಲಿ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 27 ರಾಜ್ಯಗಳ ರೈತರು ರೇಷ್ಮೆ ಕೃಷಿಯಲ್ಲಿ ತೊಡಗಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಮೈಸೂರು ಭಾಗದಲ್ಲಿ ರೇಷ್ಮೆ ಕೃಷಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ
ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ (ETV Bharat)
ರೇಷ್ಮೆ ಕೃಷಿ
ರೇಷ್ಮೆ ಕೃಷಿ (ETV Bharat)

ರೇಷ್ಮೆ ಬೆಳೆಗೆ ಕಳೆದ ಎರಡ್ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದೆ. ಇದರಿಂದ ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತೇವೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿಂದ ರೇಷ್ಮೆ ಬೆಳೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದು ಸ್ಮರಿಸಿದರು.

ರೇಷ್ಮೆ ಕೃಷಿ ಕುರಿತ ಪ್ರದರ್ಶನ
ರೇಷ್ಮೆ ಕೃಷಿ ಕುರಿತ ಪ್ರದರ್ಶನ (ETV Bharat)
ರೇಷ್ಮೆ ಕೃಷಿ
ರೇಷ್ಮೆ ಕೃಷಿ (ETV Bharat)

ಮೈಸೂರು ರೇಷ್ಮೆ ಸೀರೆಗಳು ವಿಶ್ವ ಪ್ರಸಿದ್ಧಿ ಪಡೆದಿವೆ: ಜವಳಿ ಖಾತೆ ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ ಮಾತನಾಡಿ, ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ನಮ್ಮ ಮುಖಂಡರು. ಇವರು 1949 ರಲ್ಲಿ ಕೇಂದ್ರ ರೇಷ್ಮೆ ಮಂಡಳಿಯನ್ನು ಪ್ರಾರಂಭಿಸಿದರು. ಮೈಸೂರಿನ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿಗೆ ರೇಷ್ಮೆಯನ್ನು ಪರಿಚಯಿಸಿದರು. ಮೈಸೂರು ರೇಷ್ಮೆ ಸೀರೆಗಳು ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ರೇಷ್ಮೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.

ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ರೈತರ ಆದಾಯವನ್ನು ಹೆಚ್ಚಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕದಲ್ಲಿ ತುಮಕೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ತೆಂಗು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ, ರೇಷ್ಮೆಯನ್ನು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೆಳೆಯುತ್ತಾರೆ. ಚೀನಾದ ರೇಷ್ಮೆಯಿಂದ ಭಾರತದ ರೇಷ್ಮೆಗೆ ಬೆಲೆ ಕಡಿಮೆ ಇದೆ. ಆದರೆ ಮುಂದಿನ ದಿನಗಳಲ್ಲಿ ಚೀನಾದ ರೇಷ್ಮೆ ಕಡಿಮೆ ಆಗುತ್ತದೆ. ಅಲ್ಲಿ ಕೆಲಸಗಾರರ ಕೊರತೆ ಉಂಟಾಗುತ್ತಿದೆ. ಇದರಿಂದ ಭಾರತದ ರೇಷ್ಮೆಗೆ ಉತ್ತಮ ಬೆಲೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೈಸೂರು ದಸರಾ ಪೋಸ್ಟರ್‌ ಬಿಡುಗಡೆ: ನಾಡಹಬ್ಬದ ಯಶಸ್ಸಿಗೆ ಶ್ರಮಿಸಲು ಸಚಿವರ ಕರೆ - Dasara Poster Release

ETV Bharat Logo

Copyright © 2024 Ushodaya Enterprises Pvt. Ltd., All Rights Reserved.