ETV Bharat / state

ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದರೆ ಕಠಿಣ ಕ್ರಮ; 72 FIR ದಾಖಲಿಸಿದ ಪೊಲೀಸರು - Drunk Driving Cases

ಪಾನಮತ್ತರಾಗಿ ಶಾಲಾ ವಾಹನ ಚಾಲನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಬೆಂಗಳೂರು ಪೊಲೀಸರು, 72 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

author img

By ETV Bharat Karnataka Team

Published : Aug 5, 2024, 3:33 PM IST

drunk driving
ಚಾಲಕನ ವಿರುದ್ಧ ಕ್ರಮ ಕೈಗೊಂಡ ಪೊಲೀಸರು (ETV Bharat)

ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ‌. ಇತ್ತೀಚಿನ ದಿನಗಳಲ್ಲಿ ಕೆಲ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು, ಇದುವರೆಗೆ ಒಟ್ಟು 12,165 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಈ ಪೈಕಿ, 72 ಚಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವ ಕೆಲ ಚಾಲಕರಿಂದ ಅಪಘಾತ, ಎಲ್ಲೆಂದರಲ್ಲಿ ಶಾಲಾ ವಾಹನಗಳ ನಿಲುಗಡೆ ಮುಂತಾದ ಆರೋಪಗಳು ಬಂದಿದ್ದವು. ಇದರಿಂದಾಗಿ ಈ ವರ್ಷದ ಆರಂಭದಿಂದಲೇ ಸಂಚಾರಿ ಪೊಲೀಸರು ಜನವರಿಯಲ್ಲಿ 16, ಪೆಬ್ರವರಿಯಲ್ಲಿ 07, ಜುಲೈ ತಿಂಗಳಿನಲ್ಲಿ 23 ಹಾಗೂ ಆಗಸ್ಟ್‌ನಲ್ಲಿ ಇದುವರೆಗೂ 26 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್​ನಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವು: ಸಿಸಿಟಿವಿ ದೃಶ್ಯ - Road Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.