ETV Bharat / state

ಹಾಸನ: ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ; ಒಂದೇ ಕುಟುಂಬದ 6 ಜನ ಸಾವು - Hassan Accident

author img

By ETV Bharat Karnataka Team

Published : May 26, 2024, 10:36 AM IST

Updated : May 26, 2024, 1:08 PM IST

ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತಗೊಂಡ ಕಾರು
ಅಪಘಾತಕ್ಕೀಡಾದ ಕಾರು (ETV Bharat)

ಅಪಘಾತ (ETV Bharat)

ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ.

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ) ಹಾಗು ರಾಕೇಶ್ (ಚಾಲಕ) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲೂಕಿನವರಾದ ಇವರು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಇಟಿಯೋಸ್ ಕಾರಿನಲ್ಲಿ ತೆರಳಿದ್ದರು.

ಮಂಗಳೂರಿನಿಂದ ಹಿಂದಿರುಗುತ್ತಿದ್ದಾಗ ಅಪಘಾತ ಘಟಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದು ಕೊಂದ ಹುಲಿ - Tiger Kills Woman

Last Updated : May 26, 2024, 1:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.