ETV Bharat / state

ಮಂಗಳೂರು:ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ; ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ - MDMA Drug

author img

By ETV Bharat Karnataka Team

Published : May 16, 2024, 7:36 PM IST

ಎಂಡಿಎಂ ಮಾದಕ ವಸ್ತು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 270 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

Four arrested for transporting MDMA drug
ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳು (Etv Bharat)

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರ ಬಿಜೈನ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ಗ್ರಾಮದ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರ್​ನ​ ಮೊಹಮ್ಮದ್ ನೌಮಾನ್(22), ಬೋಳಿಯಾರ್ ನ ಮೊಹಮ್ಮದ್ ಸಫೀಲ್(23) ಬಂಧಿತ ಆರೋಪಿಗಳು. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ದಿಢೀರ್ ದಾಳಿ ನಡೆಸಿ ಮಂಗಳೂರು ನಗರದ ದೇರಳಕಟ್ಟೆಯ ಸ್ಥಳದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು , 4 ಮೊಬೈಲ್ ಫೋನ್ ಗಳು, ಟೊಯೊಟಾ ಕಾರು, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ, ಕೇರಳ ಸಾಗಣೆ: ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ 2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ.

ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಎಂಡಿಎಂಎ ಮಾದಕ ವಸ್ತು ಮಾರಾಟ, ಸಾಗಣೆ ಪತ್ತೆ ಹಚ್ಚುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂಓದಿ:ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು - Four children drown

ETV Bharat Logo

Copyright © 2024 Ushodaya Enterprises Pvt. Ltd., All Rights Reserved.