ETV Bharat / state

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ: ಗುರುದತ್ತ ಹೆಗಡೆ

author img

By ETV Bharat Karnataka Team

Published : Mar 19, 2024, 9:17 PM IST

Updated : Mar 19, 2024, 10:04 PM IST

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ: ಜಿಲ್ಲೆ 3ನೇ ಹಂತದಲ್ಲಿ ಲೋಕಾಸಭಾ ಚುನಾವಣೆಗೆ ಅಣಿಯಾಗಿದೆ. ಮೇ 7 ರಂದು ಶಿವಮೊಗ್ಗದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

8 ವಿಧಾನಸಭಾ ಕ್ಷೇತ್ರಗಳ ವಿವರ: ಶಿವಮೊಗ್ಗ, ಭದ್ರಾವತಿ,‌ ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಶಿಕಾರಿಪುರ, ಸಾಗರ, ಹೊಸನಗರ ಹಾಗೂ ಬೈಂದೂರು ಕ್ಷೇತ್ರಗಳನ್ನು‌‌ ಒಳಗೊಂಡಿದೆ.

ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು: ಕ್ಷೇತ್ರದಲ್ಲಿ 8,52,107 ಪುರುಷ, 8,77,761 ಮಹಿಳೆಯರು ಸೇರಿದಂತೆ ಒಟ್ಟು 17,29,901 ಮತದಾರರಿದ್ದಾರೆ. 25,654 ಮಹಿಳಾ ಮತದಾರರು ಹೆಚ್ಚಿದ್ದಾರೆ. 29,788 ನವ ಮತದಾರರು ಈ ಭಾರಿ ಸೇರ್ಪಡೆಗೊಂಡಿದ್ದಾರೆ.‌ 85 ವರ್ಷ ಮೇಲ್ಪಟ್ಟ ಮತದಾರರು 15,315 ಹಾಗೂ PWD ಮತದಾರರು- 18,888 ಇದ್ದಾರೆ. ಜಿಲ್ಲೆಯಲ್ಲಿ ಹೊಸ ಮತದಾರರು, ಮೊದಲ ಸಲ ಮತ ಹಾಕುವವರ ಸಂಖ್ಯೆ 29,788 ಇದೆ. 2039 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ 3217 ಬ್ಯಾಲೆಟ್ ಯೂನಿಟ್, 2215 ಕಂಟ್ರೋಲ್ ಯೂನಿಟ್ ಹಾಗೂ 2340 ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತಿದೆ. 8 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು 5 ಪಿಂಕರ ಬೂತ್​ಗಳನ್ನು ಮಾಡಲಾಗುತ್ತಿದೆ. ಅದೇ ರೀತಿ ಯುವ ಮತದಾರರನ್ನು ಸೆಳೆಯಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಯುವ ಮತಗಟ್ಟೆಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.‌

ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 325 ಸೂಕ್ಷ್ಮ ಮತಗಟ್ಟೆ ಇದೆ. ಅದೇ ರೀತಿ 87 ಅತಿಸೂಕ್ಷ್ಮ ಮತಗಟ್ಟೆಗಳು‌ ಎಂದು ಗುರುತಿಸಲಾಗಿದೆ. ಚುನಾವಣಾ ಭದ್ರತೆಗಾಗಿ ಪೊಲೀಸ್ ಹಾಗೂ ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಚುನಾವಣೆ ಹಿನ್ನೆಲೆಯಲ್ಲಿ 26 ಅಂತರ್​ ಜಿಲ್ಲಾ ಚೆಕ್ ಪೊಸ್ಟ್ ಸ್ಥಾಪಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಸುವಿಧಾ ಅಪ್ಲಿಕೇಷನ್ ಮೂಲಕ ಅನುಮತಿಗೆ ಅವಕಾಶ ನೀಡಲಾಗಿದೆ. ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಕಾರ್ಯಕ್ರಮ ಸೇರಿದಂತೆ ವಿವಿಧ ಅನುಮತಿಗಳನ್ನು ಪಡೆಯಲು ಸಿಗಲ್ ವಿಂಡೋ ವ್ಯವಸ್ಥೆಯಡಿ ಸುವಿಧಾ ವೆಬ್ ಅಪ್ಲಿಕೇಷನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ನಿಯೋಜಿಸುವಂತೆ ಚುನಾವಣೆ ಆಯೋಗಕ್ಕೆ ಹೆಚ್​ಡಿಕೆ ಆಗ್ರಹ

Last Updated : Mar 19, 2024, 10:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.