ETV Bharat / state

ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ: ರಿಲ್ಯಾಕ್ಸ್​ ಮೂಡ್​ಗೆ ಜಾರಿದ 14 ಕ್ಷೇತ್ರಗಳ ಅಭ್ಯರ್ಥಿಗಳು - Lok Sabha election 2024

author img

By ETV Bharat Karnataka Team

Published : Apr 27, 2024, 10:35 AM IST

Lok Sabha election 2024  relaxation mood  Bengaluru  Mysuru  Chikkamagaluru
ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ: ರಿಲ್ಯಾಕ್ಸ್​ ಮೂಡ್​ಗೆ ಜಾರಿದ 14 ಕ್ಷೇತ್ರಗಳ ಅಭ್ಯರ್ಥಿಗಳು

14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮತದಾನ ಮುಗಿದಿರುವ ಹಿನ್ನೆಲೆ ಅಭ್ಯರ್ಥಿಗಳು ರಿಲ್ಯಾಕ್ಸ್​ ಮೂಡ್​ಗೆ ಜಾರಿದ್ದಾರೆ.

ಬೆಂಗಳೂರು/ ಮೈಸೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯವು ಮತಯಂತ್ರದಲ್ಲಿ ಭದ್ರವಾಗಿದೆ. ಮೊದಲ ಹಂತದಲ್ಲಿ ಶೇಕಡಾ 69.23ರಷ್ಟು ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದ್ದು, ಸ್ಟ್ರಾಂಗ್ ರೂಂ ಸೇರಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 68.81 ರಷ್ಟು ಮತದಾನ ನಡೆದಿತ್ತು.

Lok Sabha election 2024  relaxation mood  Bengaluru  Mysuru  Chikkamagaluru
ಇವಿಎಂಗಳನ್ನು ಸ್ಟ್ರಾಂಗ್ ರೂಂನಲ್ಲಿ ಇಡಲು ತೆಗೆದುಕೊಂಡು ಹೋಗುತ್ತಿರುವ ಸಿಬ್ಬಂದಿ

ರಿಲ್ಯಾಕ್ಸ್​ ಮೂಡ್​ನಲ್ಲಿ 14 ಕ್ಷೇತ್ರಗಳ ಅಭ್ಯರ್ಥಿಗಳು: ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ 18 ಅಭ್ಯರ್ಥಿಗಳ ಮತ ಭವಿಷ್ಯ ಮೈಸೂರಿನ ಮಹಾರಾಣಿ ಕಾಲೇಜಿನ ಸ್ಟ್ರಾಂಗ್​ ರೂಮ್​ನಲ್ಲಿ ಭದ್ರವಾಗಿದೆ. 45 ದಿನಗಳ ಕಾಲ ನಿರಂತರ ಚುನಾವಣೆ ಪ್ರಚಾರ ಕಾರ್ಯದಿಂದ ಬಸವಳಿದಿದ್ದ ಎಲ್ಲ ಅಭ್ಯರ್ಥಿಗಳೂ ಮತದಾನ ಮುಕ್ತಾಯವಾದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾರೆ.

Lok Sabha election 2024  relaxation mood  Bengaluru  Mysuru  Chikkamagaluru
ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇವಿಎಂ ತಂದ ಸಿಬ್ಬಂದಿಗೆ ಗುಲಾಬಿ ನೀಡಿ ಸ್ವಾಗತ: ನಿನ್ನೆ (ಶುಕ್ರವಾರ) ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಟ್ಟೆ ಸಿಬ್ಬಂದಿ ಇವಿಎಂಗಳನ್ನು ಸೀಲ್ ಮಾಡಿ, ಆಯಾ ಮಸ್ಟರಿಂಗ್ ಕೇಂದ್ರಗಳಿಗೆ ಸುರಕ್ಷಿತವಾಗಿ ಸಾಗಿಸಿದರು. ಅಲ್ಲಿ ಪರಿಶೀಲಿಸಿದ ನಂತರ ಮತ ಎಣಿಕೆ ಕೇಂದ್ರವಾದ ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಸುರಕ್ಷಿತವಾಗಿ ಇಡಲಾಯಿತು. ಕೆಲ ಮಸ್ಟರಿಂಗ್ ಕೇಂದ್ರಗಳಿಂದ ಇವಿಎಂ ತರುವುದು ವಿಳಂಬವಾಗಿದ್ದರಿಂದ ರಾತ್ರಿ ಬಹು ಹೊತ್ತಿನವರೆಗೂ ಪ್ರಕ್ರಿಯೆ ನಡೆಯಿತು. ಸ್ಟ್ರಾಂಗ್ ರೂಂಗೆ ಇವಿಎಂಗಳನ್ನು ತಂದ ಸಿಬ್ಬಂದಿಗೆ ಗುಲಾಬಿ ನೀಡಿ ಸ್ವಾಗತಿಸಲಾಯಿತು. ಸ್ಟ್ರಾಂಗ್ ರೂಂಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇವಿಎಂ ಡಿಮಸ್ಟರಿಂಗ್ ಕೇಂದ್ರಕ್ಕೆ ರವಾನೆ: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ನಿನ್ನೆ (ಶುಕ್ರವಾರ) ಶಾಂತಿಯುತ ಮತದಾನ ನಡೆಯಿತು. ಕಳೆದ ಲೋಕಸಭಾ ಚುನಾವಣೆಗಿಂತ ಉತ್ತಮ ಮತದಾನವಾಗಿದೆ. ಇವಿಎಂಗಳನ್ನು ಪ್ಯಾಕ್ ಮಾಡಿದ ಅಧಿಕಾರಿಗಳು, ಮತಗಟ್ಟೆಗಳಿಂದ ಡಿಮಸ್ಟರಿಂಗ್ ಕೇಂದ್ರಕ್ಕೆ ರವಾನೆ ಮಾಡಿದರು.

ಇದನ್ನೂ ಓದಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.69.23ರಷ್ಟು ಮತದಾನ - Voter Turnout

ETV Bharat Logo

Copyright © 2024 Ushodaya Enterprises Pvt. Ltd., All Rights Reserved.