ETV Bharat / state

ಸಂತ್ರಸ್ತೆಯ ಅಪಹರಣಕ್ಕೆ ಸಹಕರಿಸಿದ ಆರೋಪ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ - Kidnapping case

author img

By ETV Bharat Karnataka Team

Published : May 13, 2024, 6:15 PM IST

ಅಪಹರಣಕ್ಕೆ ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Bengaluru
ಬೆಂಗಳೂರು (ETV Bharat)

ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್‌. ಡಿ ರೇವಣ್ಣ ಅವರ ಆಪ್ತ ಸಹಾಯಕ ಸತೀಶ್ ಬಾಬುಗೆ ಸಾಥ್ ನೀಡಿದ್ದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಧು, ಮನು ಹಾಗೂ ಸುಜಯ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಮತ್ತೊಂದೆಡೆ ನ್ಯಾಯಾಂಗ ಬಂಧನದಲ್ಲಿರುವ ಸತೀಶ್ ಬಾಬುನನ್ನ ವಿಚಾರಣೆಗೆ ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ಪಡೆದಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಸತೀಶ್ ಬಾಬು ಜೊತೆಗೆ ಸಂಪರ್ಕದಲ್ಲಿದ್ದ. ಅಲ್ಲದೆ ಕೃತ್ಯಕ್ಕೆ ಸಹಕರಿಸಿದ್ದ ಆರೋಪದಡಿ ಮೂವರು ಆರೋಪಿಗಳನ್ನ ಎಸ್ಐಟಿ ವಶಕ್ಕೆ ಪಡೆದಿತ್ತು. ವಿಚಾರಣೆ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತರನ್ನ ಬಂಧಿಸಲಾಗಿತ್ತು.

ಇದನ್ನೂ ಓದಿ : ರೇವಣ್ಜ ಜಾಮೀನು ಅರ್ಜಿ ವಿಚಾರಣೆ: ಕೆಲ ಹೊತ್ತಲ್ಲೇ ಆದೇಶ ಪ್ರಕಟಿಸಲಿರುವ ನ್ಯಾಯಾಲಯ - HD Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.