ETV Bharat / state

ತುಮಕೂರಲ್ಲಿ ಬೈಕ್​ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸವಾರರ ದುರ್ಮರಣ - BIKE LORRY ACCIDENT

ಕೆಲಸ ಮುಗಿಸಿಕೊಂಡು ಬೈಕ್​ನಲ್ಲಿ ವಾಪಸ್ ತುಮಕೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

TUMAKURU  BIKE LORRY ACCIDENT  ತುಮಕೂರು ಅಪಘಾತ  DEATH
ಅಪಘಾತ ನಡೆದ ಸ್ಥಳ (ETV Bharat)
author img

By ETV Bharat Karnataka Team

Published : June 6, 2025 at 12:45 PM IST

1 Min Read

ತುಮಕೂರು: ನಗರದ ಹೊರವಲಯದ ನಂದಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರನ್ನು ರಾಜೇಶ್​ (25), ಧನಂಜಯ (27) ಹಾಗೂ ಧನುಷ್ (23) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ, ಸಮೀಪದ ಪೆಟ್ರೋಲ್​ ಬಂಕ್​ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದಂತೆ ಎದುರಿಗೆ ಬಂದ ಕಂಟೇನರ್​​ ಲಾರಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹಾಗೂ ಡಿವೈಎಸ್​ಪಿ ಚಂದ್ರಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟಿರುವ ಮೂವರು ದಾಬಸ್ ಪೇಟೆಯ ಸೋಲಾರ್ ಕಂಪನಿಯೊಂದರಲ್ಲಿ ಗಾರ್ಡ್​ಗಳಾಗಿ ಕೆಲಸ ಮಾಡುತ್ತಿದ್ದರು. ನೈಟ್​ ಶಿಫ್ಟ್​​ ಕೆಲಸ ಮುಗಿಸಿಕೊಂಡು ಬೆಳಗಿನ ಜಾವ ವಾಪಸ್ ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಕಾರಿಗೆ ಖಾಸಗಿ ಬಸ್​​ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.