ETV Bharat / state

ಗಣರಾಜ್ಯೋತ್ಸವ: ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ ಪೊಲೀಸ್ ಭದ್ರತೆ

author img

By ETV Bharat Karnataka Team

Published : Jan 26, 2024, 9:12 AM IST

75ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಜ್ಜಾಗಿದೆ. ‌ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

75th Republic Day  Manik Shah Parade ground  Police security  ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ  ಮಾಣಿಕ್ ಶಾ ಪರೇಡ್ ಮೈದಾನ  ಪೊಲೀಸ್ ಭದ್ರತೆ
ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ ಪೊಲೀಸ್ ಭದ್ರತೆ

ಬೆಂಗಳೂರು: 75ನೇ ಗಣರಾಜ್ಯೋತ್ಸವಕ್ಕೆ ಎಂ.ಜಿ.ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.

ಪಥ ಸಂಚಲನದಲ್ಲಿ 1,150 ಮಂದಿ ಭಾಗಿಯಾಗಲಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ 38 ತುಕಡಿಗಳು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 1,500 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಮುಗಿಯುವವರೆಗೂ ಮೈದಾನದಲ್ಲಿ ಭಾರಿ ಪೊಲೀಸ್ ಭದ್ರತೆ ವಹಿಸಲಾಗಿದೆ. ನಗರದ 9 ಡಿಸಿಪಿ, 16 ಎಸಿಪಿ, 46 ಇನ್ಸ್‌ಪೆಕ್ಟರ್, 109 ಪಿಎಸ್ಐ, 77 ಎಎಸ್ಐ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸಂಚಾರ ನಿರ್ವಹಣೆಗಾಗಿ 4 ಡಿಸಿಪಿ, 6 ಎಸಿಪಿ, 21 ಇನ್ಸ್‌ಪೆಕ್ಟರ್ ಸೇರಿದಂತೆ 575 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಕೆಎಸ್ಆರ್‌ಪಿ/ಸಿಎಆರ್ ತುಕಡಿ, 2 ಅಗ್ನಿಶಾಮಕ ವಾಹನ, 2 ಆಂಬ್ಯುಲೆನ್ಸ್‌ , ಕ್ಷಿಪ್ರ ಕಾರ್ಯಾಚರಣೆ ಪಡೆ, ಡಿ-ಸ್ವಾಟ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಹನಿಮೂನ್‌ಗೆ ಹೋಗದೆ ಸಮುದ್ರ ತೀರ ಸ್ವಚ್ಛತೆ: ಉಡುಪಿ ದಂಪತಿಗೆ ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.