ETV Bharat / state

ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರೂ ದಾರುಣ ಸಾವು - WOMEN PEDESTRIANS WERE HIT CAR

ಮೃತಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.

Accident
ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ (ETV Bharat)
author img

By ETV Bharat Karnataka Team

Published : June 24, 2025 at 11:27 PM IST

1 Min Read

ದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ತಿಮ್ಮಕ್ಕ(60), ಯಶೋಧಾ(33) ಮೃತಪಟ್ಟ ದುರ್ದೈವಿಗಳು. ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ.

ಅಷ್ಟೇ ಅಲ್ಲ ಮುಂದಿದ್ದ ಕಾಂಪೌಂಡ್​ಗೆ ಕಾರು ಡಿಕ್ಕಿಯಾಗಿದೆ. ಕಾರಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ಮೃತಪಟ್ಟ ಮಹಿಳೆಯರಿಗೆ ಪರಿಹಾರಕ್ಕಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.

ಮೃತಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. ಅಪಘಾತ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ಅಡಚಣೆ

ಕೇಂದ್ರ ವಿತ್ತ ಸಚಿವೆ - ಸಿಎಂ ಭೇಟಿ; ಬೆಳವಣಿಗೆಗೆ ಪೂರಕವಾಗಿರುವ ವಿಧಾನ ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಸೂಚಿಸುವಂತೆ ಸಿಎಂ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.